×
Ad

ಕಂಪ್ಲಿ | ಎನ್‌ಪಿಎಸ್ ರದ್ದು, ಒಪಿಎಸ್ ಮರುಜಾರಿಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಶಿಕ್ಷಕರ ಪ್ರತಿಭಟನೆ

Update: 2026-01-08 19:07 IST

ಕಂಪ್ಲಿ : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ (ಒಪಿಎಸ್) ಮರುಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರು ಗುರುವಾರ ಶಾಲೆಗಳಲ್ಲಿ ಕಪ್ಪುಪಟ್ಟಿ ಧರಿಸಿ ಪಾಠ ಬೋಧನೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ಪಟ್ಟಣದ ಸತ್ಯನಾರಾಯಣಪೇಟೆಯ ಟಿ.ಎಲ್.ಸಿ ಕೇಂದ್ರದಲ್ಲಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ಸೇವಾನಿರತ ಶಿಕ್ಷಕರಿಗೂ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶ ಶಿಕ್ಷಕರಿಗೆ ತೀವ್ರ ನೋವುಂಟು ಮಾಡಿದೆ. ಈ ಕುರಿತು ಕಾನೂನಿಗೆ ಸೂಕ್ತ ತಿದ್ದುಪಡಿ ತರಬೇಕು. ಸೇವಾನಿರತ ಶಿಕ್ಷಕರಿಗೆ ಟಿಇಟಿ ಕಡ್ಡಾಯ ಮಾಡಬಾರದು ಎಂದು ಆಗ್ರಹಿಸಿದರು.

ಗುತ್ತಿಗೆ ಆಧಾರದ ನೇಮಕಾತಿಗಳನ್ನು ಕೈಬಿಟ್ಟು ಕಾಯಂ ನೇಮಕಾತಿಗೆ ಆದ್ಯತೆ ನೀಡಬೇಕು. ದೇಶದ ಎಲ್ಲ ಶಿಕ್ಷಕರಿಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಕೇಂದ್ರ ಸರ್ಕಾರದ ವೇತನ ಮಾದರಿಯನ್ನು ರಾಜ್ಯದ ಶಿಕ್ಷಕರಿಗೂ ಅನ್ವಯಿಸಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ಶಿಕ್ಷಕರ ಸಂಘಟನೆಗಳು ಹಾಗೂ ರಾಜ್ಯ–ಜಿಲ್ಲಾ ಜಂಟಿ ಕ್ರಿಯಾ ಸಮಿತಿಗಳ ಸೂಚನೆಯಂತೆ ರಾಜ್ಯದಾದ್ಯಂತ ಎಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರು ಇಂದು ಕಪ್ಪುಪಟ್ಟಿ ಧರಿಸಿ ಶಾಲೆಗೆ ಹಾಜರಾಗಿ ಪಾಠ ಬೋಧನೆ ಮಾಡುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಸುನಿತಾ ಪೂಜಾರ, ಉಪಾಧ್ಯಕ್ಷೆ ನಾಗಮ್ಮ, ಜಿಲ್ಲಾ ನಾಮನಿರ್ದೇಶಿತ ಸದಸ್ಯ ಚಂದ್ರಶೇಖರ, ಶಿಕ್ಷಣ ಸಂಯೋಜಕ ರೇವಣ್ಣ, ಸಿಆರ್ಪಿಗಳಾದ ಭೂಮೇಶ, ಕರುಣಾಕರ್ ಆಚಾರ್, ರೇಣುಕಾರಾಧ್ಯ ಸೇರಿದಂತೆ ಶಿಕ್ಷಕರಾದ ಭವ್ಯ, ಪಂಪಯ್ಯ, ವೀರಕುಮಾರ್, ಖಲೀಲ್, ಸಂಗನಗೌಡ, ಹನುಮನಗೌಡ, ಮೂರ್ತಿ, ವಿರೂಪಾಕ್ಷಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ವೇಳೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎಮ್ಮಿಗನೂರಿನಲ್ಲಿ ಕೂಡ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಪಾಠ ಬೋಧನೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಬಿ.ಎಸ್. ಸದ್ದುಜಾತಪ್ಪ ಹಾಗೂ ಶಿಕ್ಷಕರಾದ ಎಸ್. ರಾಮಪ್ಪ, ಮಂಜುನಾಥ, ದೇವರಾಜ್, ಲೋಕೇಶ್, ಸುಧಾ, ಪ್ರಮೀಳಾ, ರಜಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು.








ಇದೇ ವೇಳೆ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಎಮ್ಮಿಗನೂರಿನಲ್ಲಿ ಕೂಡ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಪ್ಪುಪಟ್ಟಿ ಧರಿಸಿ ಪಾಠ ಬೋಧನೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಬಿ.ಎಸ್. ಸದ್ದುಜಾತಪ್ಪ ಹಾಗೂ ಶಿಕ್ಷಕರಾದ ಎಸ್. ರಾಮಪ್ಪ, ಮಂಜುನಾಥ, ದೇವರಾಜ್, ಲೋಕೇಶ್, ಸುಧಾ, ಪ್ರಮೀಳಾ, ರಜಿಯಾ ಸೇರಿದಂತೆ ಇತರರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News