ಕಂಪ್ಲಿ | ಸುಪ್ತ ಪ್ರತಿಭೆಗಳನ್ನು ಹೊರ ಹಾಕುವುದು ಪ್ರತಿಭಾ ಕಾರಂಜಿ ಉದ್ದೇಶ : ಇಸಿಒ ರೇವಣ್ಣ
ಕಂಪ್ಲಿ: ಮಕ್ಕಳಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿನ ಸುಪ್ತ ಪ್ರತಿಭೆಗಳನ್ನು ಹೊರತರುವುದೇ ಪ್ರತಿಭಾ ಕಾರಂಜಿಯ ಮುಖ್ಯ ಉದ್ದೇಶವಾಗಿದೆ. ಸ್ಪರ್ಧೆಗಳ ನಿರ್ಣಾಯಕರು ಯಾವುದೇ ತಾರತಮ್ಯವಿಲ್ಲದೆ ಎಚ್ಚರಿಕೆಯಿಂದ ನೈಜ ಪ್ರತಿಭೆಯನ್ನು ಆಯ್ಕೆ ಮಾಡಬೇಕು ಎಂದು ಇಸಿಒ ರೇವಣ್ಣ ಹೇಳಿದರು.
ತಾಲೂಕಿನ ಮೆಟ್ರಿ ಗ್ರಾಮದ ಮಹಾದೇವ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಮೆಟ್ರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಸೋಲು–ಗೆಲುವಿನ ಬಗ್ಗೆ ಯೋಚಿಸದೇ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು. ಕೀಳರಿಮೆಯಿಂದ ಅನೇಕ ಮಕ್ಕಳು ತಮ್ಮ ಪ್ರತಿಭೆಯನ್ನು ವ್ಯಕ್ತಪಡಿಸಲಾಗದೇ ಎಲೆಮರೆಯ ಕಾಯಿಯಂತೆ ಉಳಿದು ಬಿಡುತ್ತಾರೆ. ಆದ್ದರಿಂದ ಇಂತಹ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವುದು ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ಸಿಆರ್‌ಪಿ ಭೂಮೇಶ್ವರ ಮಾತನಾಡಿದರು.
ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಹಾಗೂ ಕಲಾತ್ಮಕ ಸ್ಪರ್ಧೆಗಳು ನಡೆದವು. ಕಾರ್ಯಕ್ರಮದಲ್ಲಿ ವಿಜೇತರಾದ ಎಲ್ಲ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೊಡ್ಡಬಸಪ್ಪ, ನಿರ್ದೇಶಕ ಎಚ್.ಪಿ. ಸೋಮಶೇಖರ, ಜಿಪಿಟಿ ಸಂಘದ ಕಾರ್ಯದರ್ಶಿ ನಿಂಗರಾಜ, ಮುಖ್ಯಗುರುಗಳಾದ ಡಿ. ಜಗದೀಶ, ದೊಡಬಸವ, ವಿರೇಶಮ್ಮ, ಸುಮಿತ್ರ, ನಿರ್ಮಲ, ಮಾಲಿಕ್, ಮಲ್ಲಿಕಾರ್ಜುನ ಸೇರಿದಂತೆ ಸಹ ಶಿಕ್ಷಕರು ರಾಜನಾಯ್ಕ, ಉಷಾರಾಣಿ, ಧನಲಕ್ಷ್ಮಿ, ಸರ್ವಮಂಗಳ, ಮಡಿವಾಳ, ಪಂಪನಗೌಡ, ನಾಗರಾಜ ಸೇರಿದಂತೆ ಅನೇಕ ಶಿಕ್ಷಕರು, ಸ್ಥಳೀಯ ಮುಖಂಡರು ಹಾಗೂ 13 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.