ಕಂಪ್ಲಿ: ನದಿಯನ್ನೇ ನಂಬಿ ಬದುಕು ಕಟ್ಟಿಕೊಂಡಿರುವ ಮೀನುಗಾರರ ಜೀವನ ತೀವ್ರ ಸಂಕಷ್ಟದಲ್ಲಿದೆ. ಸರ್ಕಾರ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಮೀನುಗಾರರ ಕಲ್ಯಾಣ ಯೋಜನೆಗಳು ಹಾಗೂ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ತಳವಾರ ಆಗ್ರಹಿಸಿದರು.

ಪಟ್ಟಣದ ಕೋಟೆ ಪ್ರದೇಶದ ತುಂಗಭದ್ರಾ ನದಿ ದಡದಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ಮೀನುಗಾರರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಮಾಜಕ್ಕೆ ಪೌಷ್ಟಿಕ ಆಹಾರ ಒದಗಿಸುವ ಮೀನುಗಾರರಿಗೆ ಇಂದಿಗೂ ವಸತಿ, ಆರೋಗ್ಯ ಮತ್ತು ಶಿಕ್ಷಣದಂತಹ ಕನಿಷ್ಠ ಸೌಲಭ್ಯಗಳು ಮರೀಚಿಕೆಯಾಗಿವೆ. ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಮಾಹಿತಿ ಕೊರತೆಯಿಂದಾಗಿ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪದೆ ಕಾಗದಕ್ಕೆ ಸೀಮಿತವಾಗಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಳಿಕ ನಡೆದ ಸಂವಾದದಲ್ಲಿ ಮೀನುಗಾರಿಕೆ ಸಲಕರಣೆಗಳು, ಸಾಲ ಸೌಲಭ್ಯ, ವಿಮೆ ಹಾಗೂ ಮಾರುಕಟ್ಟೆ ವ್ಯವಸ್ಥೆಯಲ್ಲಿನ ತೊಡಕುಗಳ ಕುರಿತು ಚರ್ಚಿಸಲಾಯಿತು. ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ರೂಪುರೇಷೆ ಸಿದ್ಧಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಕಂಪ್ಲಿ ಕೋಟೆ ಮೀನುಗಾರರ ಸಹಕಾರ ಸಂಘದ ಉಪಾಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ಮಣಿಕಂಠ, ಮುಖಂಡರಾದ ವೆಂಕಟೇಶ, ಪ್ರದೀಪ್, ಗಿರೀಶ್ ಹಾಗೂ ಮಾರೆಪ್ಪ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ