×
Ad

ಕಂಪ್ಲಿ | ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಬದುಕಿಗೆ ನೆಮ್ಮದಿ: ಕೆ.ಶ್ರೀನಿವಾಸರಾವ್

Update: 2026-03-08 23:52 IST

ಕಂಪ್ಲಿ: ರಾಜ್ಯದಲ್ಲಿ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಉತ್ತಮವಾಗಿರಲಿ ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಿಂದ ಸಾಕಷ್ಟು ಜನರ ಜೀವನ ನೆಮ್ಮದಿಯಿಂದ ಕೂಡಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಹೇಳಿದರು.

ತಾಲೂಕ ಪಂಚಾಯತಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಭಾನುವಾರ ಆಯೋಜಿಸಿದ್ದ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳು ಜನರಿಗೆ ವರದಾನವಾಗಿದ್ದು, ಈ ಯೋಜನೆಗಳು ಅರ್ಹ ಕುಟುಂಬಗಳಿಗೆ ತಲುಪುವಂತೆ ಮಾಡಬೇಕು ಎಂದು ಹೇಳಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ. ಶ್ರೀಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರು ಕೂಡ ಪುರುಷರಷ್ಟೇ ಸಮಾನರು. ಮನೆಯ ಯಜಮಾನಿಕೆಯಿಂದ ಹಿಡಿದು ದೇಶದ ಹಣಕಾಸು ಸಚಿವೆಯ ಸ್ಥಾನವರೆಗೂ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ ಎಂದು ಹೇಳಿದರು.

ಇಂದಿನ ಆಧುನಿಕ ಸಮಾಜದಲ್ಲಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದು ಹಲವಾರು ಕ್ಷೇತ್ರಗಳಲ್ಲಿ ತಮ್ಮದೇ ಆದ ಪ್ರತಿಭೆ ತೋರಿಸುತ್ತಿದ್ದು, ಸ್ಪರ್ಧಾತ್ಮಕ ಯುಗದಲ್ಲಿಯೂ ಪ್ರಬಲ ಪೈಪೋಟಿ ನೀಡುತ್ತಿರುವುದು ಸಂತೋಷದಾಯಕ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ ಕೆ.ಎಸ್.ಮಲ್ಲನಗೌಡ ಹಾಗೂ ಶ್ರೀಶೈಲಗೌಡ, ಕಲ್ಯಾಣ ಕರ್ನಾಟಕ ರಸ್ತೆ ವಿಭಾಗದ ದೇವರೆಡ್ಡಿ, ಆಹಾರ ಮತ್ತು ನಾಗರಿಕ ಇಲಾಖೆಯ ವಿರುಪಾಕ್ಷಿಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೋಹನ್, ಲತಿಫಾಬೇಗಂ, ಪಿಡಿಒಗಳು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನಿರ್ದೇಶಕರು, ಸ್ವಸಹಾಯ ಸಂಘದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು, ಮತ್ತು ತಾಲೂಕು ಪಂಚಾಯಿತಿಯ ಎಲ್ಲಾ ಅಧಿಕಾರಿ ವೃಂದದವರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News