×
Ad

ಕಂಪ್ಲಿ | ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Update: 2026-01-01 21:05 IST

ಕಂಪ್ಲಿ : ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಗುರುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರು, ನಾಡಿಗೆ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರವಾಗಿದೆ. ಅವರ ಆದರ್ಶ ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ರಾಜ್ಯ ವಿಶ್ವಕರ್ಮ ಸಮಾಜದ ಸಹ ಕಾರ್ಯದರ್ಶಿ ಡಿ. ಮೌನೇಶ ಮಾತನಾಡಿ, ಪ್ರತೀ ವರ್ಷ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ, ತಾಲೂಕು ಆಡಳಿತದಿಂದ ಇದುವರೆಗೂ ಯಾವುದೇ ಸಹಾಯಧನ ಲಭಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದಿನಾಚರಣೆಯಲ್ಲಿ ಶಿಲ್ಪಿಗಳಿಗೆ ಸನ್ಮಾನಿಸುವ ಪದ್ಧತಿಯನ್ನು ತಾಲೂಕು ಆಡಳಿತ ಅನುಸರಿಸದೇ ಇರುವುದರಿಂದ ವಿಶ್ವಕರ್ಮ ಸಮಾಜಕ್ಕೆ ಬೇಸರ ಉಂಟಾಗಿದೆ ಎಂದರು.

ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಪಟ್ಟಣದ ಕಾಳಿಕಾ ಕಮಠೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಪುನಸ್ಕಾರ ಸಲ್ಲಿಸಲಾಯಿತು. ನಂತರ ಅಮರಶಿಲ್ಪಿ ಜಕಣಾಚಾರಿ ವೃತ್ತದ ನಾಮಫಲಕಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಲ್ಪಿ ವಿಶ್ವನಾಥ ಅವರನ್ನು ವಿಶ್ವಕರ್ಮ ಸಮಾಜದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಿರಸ್ತೇದಾರ ರಮೇಶ, ವಿಶ್ವಕರ್ಮ ಸಮಾಜದ ಅಧ್ಯಕ್ಷ ಡಿ.ಎ. ರುದ್ರಪ್ಪ ಆಚಾರಿ, ಉಪಾಧ್ಯಕ್ಷರಾದ ಡಿ. ಕಾಳಾಚಾರಿ, ಎ. ಚಂದ್ರಶೇಖರ, ಖಜಾಂಚಿ ರಾಮಚಂದ್ರ, ಮಹಿಳಾ ಮಂಡಳಿ ಅಧ್ಯಕ್ಷೆ ಡಿ. ವೀಣಾ, ಕಾರ್ಯದರ್ಶಿ ಸವಿತಾ, ಮುಖಂಡರಾದ ಎ. ರಾಘವೇಂದ್ರ, ಎ. ಮೌನೇಶ, ನಾರಾಯಣಿ, ವೀರಭದ್ರ, ವಿಜಯಕುಮಾರ, ಆನಂದ, ವಿಜಯ, ರತ್ನಮ್ಮ, ಜ್ಯೋತಿ, ವಾಣಿ ಸೇರಿದಂತೆ ಸಮಾಜದ ಸದಸ್ಯರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News