ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿ ಪರಾರಿ
ಯಲ್ಲಪ್ಪ
ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಬಂಧಿಯೊಬ್ಬ ಸಿಬ್ಬಂದಿಯ ಕಣ್ತಪ್ಪಿಸಿ ಪರಾರಿಯಾದ ಘಟನೆ ರವಿವಾರ ನಡೆದಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಕಲ್ಲಂಗಿ ಗ್ರಾಮದ ನಿವಾಸಿ ಯಲ್ಲಪ್ಪ ಪರಾರಿಯಾದ ಬಂಧಿ ಎಂದು ತಿಳಿದು ಬಂದಿದೆ. ಯಲ್ಲಪ್ಪನನ್ನು ರವಿವಾರ ಬೆಳಗ್ಗೆ ಸುಮಾರು 10.15ರ ವೇಳೆಗೆ ಹೊರಗಿನ ಕೆಲಸಕ್ಕಾಗಿ ಕರೆದೊಯ್ಯಲಾಗಿತ್ತು. ಈ ಸಂದರ್ಭದಲ್ಲಿ ಆತ ಸಿಬ್ಬಂದಿಯ ಕಣ್ತಪ್ಪಿಸಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ಕೇಂದ್ರ ಕಾರಾಗೃಹದ ಅಧೀಕ್ಷಕರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿರುವ ಜೈಲು ಅಧಿಕಾರಿಗಳು, ಪರಾರಿಯಾದ ಬಂಧಿಯನ್ನು ತಕ್ಷಣ ಪತ್ತೆಹಚ್ಚಿ ಮರುಬಂಧಿಸಲು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಅಲ್ಲದೆ, ರಾಜ್ಯದ ಎಲ್ಲ ಪೊಲೀಸ್ ಠಾಣೆಗಳು ಹಾಗೂ ನೆರೆಯ ರಾಜ್ಯಗಳ ಪೊಲೀಸರಿಗೂ ತುರ್ತು ಸಂದೇಶ ರವಾನಿಸುವಂತೆ ಬಳ್ಳಾರಿ ಕಂಟ್ರೋಲ್ ರೂಮ್‌ನ ವೈರ್‌ಲೆಸ್ ಆಪರೇಟರ್ ಮೂಲಕ ಮಾಹಿತಿ ನೀಡಲಾಗಿದೆ.