ಬಳ್ಳಾರಿ: ನಗರದ ಕೇಂದ್ರ ಕಾರಾಗೃಹದಲ್ಲಿ ಅಧಿಕಾರಿಗಳು ನಡೆಸಿದ ತಪಾಸಣೆ ವೇಳೆ ಮೊಬೈಲ್, ಇಯರ್‌ಫೋನ್ ಹಾಗೂ ಎರಡು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ.

ಜೈಲಿನ ಪ್ರಭಾರಿ ಅಧಿಕಾರಿ ಟಿ.ಬಿ. ಭಜಂತ್ರಿ ನೇತೃತ್ವದಲ್ಲಿ ತಪಾಸಣೆ ನಡೆಸಿದ ವೇಳೆ ಜೈಲಿನ 10ನೇ ಬ್ಯಾರಕ್‌ನ ಕೊಠಡಿಯಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಬಚ್ಚಿಡಲಾಗಿದ್ದ ಮೊಬೈಲ್, ಇಯರ್‌ಫೋನ್ ಹಾಗೂ ಎರಡು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಮಂಡ್ಯ ಮೂಲದ ಖೈದಿಗಳಾದ ಮಂಜು ಅಲಿಯಾಸ್ ಮಾಕಿ ಹಾಗೂ ಅಭಿಷೇಕ್ ಅವರು ಮೊಬೈಲ್ ಅನ್ನು ಬಚ್ಚಿಟ್ಟು ಬಳಸುತ್ತಿದ್ದುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜೈಲಿನೊಳಗೆ ಮೊಬೈಲ್ ಹಾಗೂ ಸಿಮ್ ಕಾರ್ಡ್‌ಗಳು ಹೇಗೆ ಬಂದವು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor