ಸಂಡೂರು: ಜಾತಿಭೇದ, ಅಹಂಕಾರ ಹಾಗೂ ಮೇಲು-ಕೀಳು ಎಂಬ ಮನೋಭಾವವನ್ನು ತೊರೆದು ವಿಶ್ವಮಾನವರಾಗಿ ಬದುಕುವುದೇ ಕನಕದಾಸರ ಕೀರ್ತನೆಗಳ ಸಾರವಾಗಿದೆ ಎಂದು ಡಾ. ವೆಂಕಟಗಿರಿ ದಳವಾಯಿ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಕುರುಬರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕನಕದಾಸರು ಸಾಮಾಜಿಕ ಅಪಮಾನಗಳನ್ನು ಎದುರಿಸಿದರೂ ಎಲ್ಲರ ಒಳಿತನ್ನೇ ಬಯಸಿದ ದೂರದೃಷ್ಟಿಯುಳ್ಳ ತತ್ವಜ್ಞಾನಿಯಾಗಿದ್ದರು. ಅವರ ಕೀರ್ತನೆಗಳು ಸಮಾಜದಲ್ಲಿನ ಜಾತಿಭೇದ ಮತ್ತು ಅಹಂಕಾರದಂತಹ ಮಾನಸಿಕ ರೋಗಗಳಿಗೆ ಮದ್ದಾಗಿವೆ ಎಂದು ಹೇಳಿದರು.

ಮೆರವಣಿಗೆಗೆ ಚಾಲನೆ : ಇದಕ್ಕೂ ಮುನ್ನ ಸಂಸದ ಈ. ತುಕಾರಾಂ ಅವರು ಕನಕ ಭವನದಲ್ಲಿ ಪೂಜೆ ಸಲ್ಲಿಸಿ, ಡೊಳ್ಳು ಬಾರಿಸುವ ಮೂಲಕ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಶಾಸಕಿ ಅನ್ನಪೂರ್ಣ ಈ. ತುಕಾರಾಂ ಪಾಲ್ಗೊಂಡು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ತಿರುಪತಿ ಪಾಟೀಲ್, ಕುರುಬರ ಸಂಘದ ಗೌರವಾಧ್ಯಕ್ಷ ಕೆ. ಸತ್ಯಪ್ಪ, ತಾಲ್ಲೂಕು ಅಧ್ಯಕ್ಷ ಕೆ.ವಿ. ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್. ಅಕ್ಕಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರೇಣುಕಾಚಾರ್ಯ ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ, ಸಿಡಿಪಿಒ ನಾಗರಾಜ್, ಮುಖಂಡರಾದ ಸಿ.ಎಂ. ಶಿಗ್ಗಾವಿ, ಮಸೂತಿ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ