×
Ad

ಸಂಡೂರಿನಲ್ಲಿ ಎಸ್‌ಐಆರ್ ಪ್ರಕ್ರಿಯೆ ಚುರುಕು; 2.10 ಲಕ್ಷ ಮತದಾರರಿಗೆ ಎಣಿಕೆ ಫಾರ್ಮ್ ವಿತರಣೆ

Update: 2026-07-06 18:51 IST

ಸಂಡೂರು/ಬಳ್ಳಾರಿ: ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ವೇಗವಾಗಿ ಸಾಗುತ್ತಿದ್ದು, ಮತದಾರರ ಮಾಹಿತಿ ಸಂಗ್ರಹ ಹಾಗೂ ಎಣಿಕೆ ಕಾರ್ಯ ಪ್ರಗತಿಯಲ್ಲಿದೆ ಎಂದು ತಹಶೀಲ್ದಾರ ಅನಿಲ್ ಕುಮಾರ್ ತಿಳಿಸಿದ್ದಾರೆ.

ಕ್ಷೇತ್ರದಲ್ಲಿ ಒಟ್ಟು 259 ಮತಗಟ್ಟೆಗಳಿದ್ದು, 2,42,174 ಮತದಾರರು ನೋಂದಾಯಿತರಾಗಿದ್ದಾರೆ. ಇವರ ಪೈಕಿ ಈಗಾಗಲೇ 2,10,657 ಮತದಾರರಿಗೆ ಎಣಿಕೆ (Enumeration) ಫಾರ್ಮ್‌ಗಳನ್ನು ವಿತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಂಗ್ರಹಿಸಲಾದ ಫಾರ್ಮ್‌ಗಳ ಪೈಕಿ 48,699 ಫಾರ್ಮ್‌ಗಳನ್ನು BLO App ಮೂಲಕ ಯಶಸ್ವಿಯಾಗಿ ಅಪ್ಲೋಡ್ ಮಾಡಲಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯನ್ನು ನವೀಕರಿಸುವ ಉದ್ದೇಶದಿಂದ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (BLO) ಮನೆಮನೆಗೆ ತೆರಳಿ ಫಾರ್ಮ್ ವಿತರಣೆ ಹಾಗೂ ಸಂಗ್ರಹ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನೂ ಫಾರ್ಮ್ ಸಲ್ಲಿಸದ ಮತದಾರರು ಅಗತ್ಯ ದಾಖಲೆಗಳೊಂದಿಗೆ ಶೀಘ್ರದಲ್ಲೇ ಸಲ್ಲಿಸಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ತಾಲೂಕು ಆಡಳಿತ ನಿಗದಿತ ಅವಧಿಯೊಳಗೆ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ ಹಾಗೂ ಸಮಗ್ರಗೊಳಿಸುವ ಕಾರ್ಯ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News