×
Ad

ಸಿರುಗುಪ್ಪ | ತಾಳೂರು ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಪಿಎಚ್‌ಸಿ ಸಿಬ್ಬಂದಿ ವಸತಿ ನಿಲಯ ಉದ್ಘಾಟನೆ

Update: 2026-01-21 21:24 IST

ಸಿರುಗುಪ್ಪ: ಸಿರುಗುಪ್ಪ ತಾಲೂಕು ತಾಳೂರು ಗ್ರಾಮದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್, ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಮಂಡಳಿಯ 2024–25ನೇ ಸಾಲಿನ ಯೋಜನಾ ಅನುದಾನದ ಅಡಿಯಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು, ನರ್ಸ್‌ಗಳು ಹಾಗೂ ಡಿ-ಗ್ರೂಪ್ ಸಿಬ್ಬಂದಿಗಾಗಿ ನಿರ್ಮಿಸಲಾದ ವಸತಿ ನಿಲಯ ಕಟ್ಟಡವನ್ನು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ.ಎಂ. ನಾಗರಾಜ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಿ.ಎಂ. ನಾಗರಾಜ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ದೊರಕಬೇಕು ಎಂಬ ಉದ್ದೇಶದಿಂದ ಸರ್ಕಾರ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಒದಗಿಸಿದರೆ ಸೇವೆಯ ಗುಣಮಟ್ಟ ಇನ್ನಷ್ಟು ಉತ್ತಮಗೊಳ್ಳುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಪುರುಷೋತ್ತಮರೆಡ್ಡಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಗೌರಮ್ಮ ಈರಣ್ಣ, ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುನಿಲ್, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ರಾಕೇಶ್, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಿಲ್ಲಾ ಸಾಕ್ಷರತಾ ಸದಸ್ಯ ಅಬ್ದುಲ್ ನಬಿ, ಗ್ರಾಮ ಪಂಚಾಯತ್ ಪಿಡಿಓ ಮೊಹಮ್ಮದ್ ಖಾದಿರ್ ಸೇರಿದಂತೆ ದೇವರೆಡ್ಡಿ, ಫಕೀರಯ್ಯ, ಭುವಪ್ಪ, ನೆರಣಿಕಪ್ಪ, ನಾಗಪ್ಪ, ಡಿ. ಮಲ್ಲರೆಡ್ಡಿ, ವೆಂಕಟರಾಮ ರೆಡ್ಡಿ, ರಾಮಾಂಜನಿ ಉಪಸ್ಥಿತರಿದ್ದರು.

ಇದೇ ವೇಳೆ ಆಸ್ಪತ್ರೆಯ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News