Siruguppa | ಪೌರಕಾರ್ಮಿಕರಿಂದ ಕಿರು ನಾಟಕದ ಮೂಲಕ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ
ಸಿರುಗುಪ್ಪ: ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ತಾಲೂಕಿನ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಬೋಯಕೇರಿ ಹಾಗೂ ಉಪ್ಪಾರವಾಡಿ ಶಾಲೆಯ ವಿದ್ಯಾರ್ಥಿಗಳನ್ನು ಘನ ತ್ಯಾಜ್ಯ ನಿರ್ವಹಣೆ (SWM) ಘಟಕಕ್ಕೆ ಕರೆತಂದು ಪ್ರಾಯೋಗಿಕ ಮಾಹಿತಿ ನೀಡಲಾಯಿತು.
ಈ ಸಂದರ್ಭದಲ್ಲಿ ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ಕಾಳಜಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸುವ ವಿಧಾನವನ್ನು ಅಧಿಕಾರಿಗಳು ವಿವರಿಸಿದರು. ಏಕಬಳಕೆ ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪೌರಕಾರ್ಮಿಕರು ಕಿರು ನಾಟಕ ಪ್ರದರ್ಶಿಸಿ, ತ್ಯಾಜ್ಯ ವಿಂಗಡಣೆ ಮತ್ತು ಸ್ವಚ್ಛತೆಯ ಮಹತ್ವವನ್ನು ಮನಮುಟ್ಟುವ ರೀತಿಯಲ್ಲಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯಗುರು ದುರುಗಪ್ರಸಾದ್, ಅತಿಥಿ ಶಿಕ್ಷಕರಾದ ಹುಚ್ಚಿರಪ್ಪ, ಶೇಕಣ್ಣ, ರೇವಣಸಿದ್ಧ, ಚಾಮುಂಡಿ, ಜ್ಞಾನೇಶ್ವರಿ, ಪಟ್ಟಣ ಪಂಚಾಯಿತಿ ಆರೋಗ್ಯ ನಿರೀಕ್ಷಣಾಧಿಕಾರಿ ಅನ್ನಪೂರ್ಣ, ಕಮ್ಯುನಿಟಿ ಮೊಬೈಲೈಸರ್‌ಗಳಾದ ರೇಷ್ಮಾ, ಹುಲಿಗೆಮ್ಮ, ಹಸನ್ ಸಬ್ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.