Siruguppa | ತೆಕ್ಕಲಕೋಟೆಯಲ್ಲಿ ಡಾ.ಎಪಿಜೆ ಅಬ್ದುಲ್ ಕಲಾಂ ಪುಣ್ಯಸ್ಮರಣೆ

Update: 2026-07-28 17:25 IST

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಡಾ. ಎಪಿಜೆ ಅಬ್ದುಲ್ ಕಲಾಂ ವೃತ್ತದಲ್ಲಿ ಭಾರತದ ಮಾಜಿ ರಾಷ್ಟ್ರಪತಿ ಹಾಗೂ ಖ್ಯಾತ ವಿಜ್ಞಾನಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯಸ್ಮರಣೆ ಅಂಗವಾಗಿ ಪಿಂಜಾರ್ ಸಮುದಾಯದ ಯುವಕರಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಡಾ. ಕಲಾಂ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸರಳ ಜೀವನ, ದೇಶಭಕ್ತಿ, ವೈಜ್ಞಾನಿಕ ಸಾಧನೆಗಳು ಹಾಗೂ ಯುವಜನತೆಗೆ ನೀಡಿದ ಪ್ರೇರಣಾದಾಯಕ ಸಂದೇಶಗಳನ್ನು ಸ್ಮರಿಸಲಾಯಿತು.

ಈ ವೇಳೆ ಮಾತನಾಡಿದ ಯುವಕರು, ಡಾ. ಎಪಿಜೆ ಅಬ್ದುಲ್ ಕಲಾಂ ಅವರು ತಮ್ಮ ಜ್ಞಾನ, ಪರಿಶ್ರಮ ಮತ್ತು ವಿನಯಶೀಲತೆಯ ಮೂಲಕ ದೇಶದ ಪ್ರತಿಯೊಬ್ಬ ಯುವಕರಿಗೂ ಆದರ್ಶ ವ್ಯಕ್ತಿಯಾಗಿದ್ದಾರೆ. ಅವರ ಕನಸುಗಳನ್ನು ಸಾಕಾರಗೊಳಿಸಲು ಶಿಕ್ಷಣ, ಶಿಸ್ತು ಹಾಗೂ ರಾಷ್ಟ್ರಸೇವೆಯ ಮನೋಭಾವವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಅಮೀರ್, ಸಬ್ಜಲ್, ಖಾಜ, ರಫೀಕ್, ಮೈಬು, ಕಾಸೀಂ, ರಾಜ, ನೀಜ್ಜು ಸೇರಿದಂತೆ ಪಿಂಜಾರ್ ಸಮುದಾಯದ ಯುವಕರು ಭಾಗವಹಿಸಿ ಡಾ. ಕಲಾಂ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News