ಸಿರುಗುಪ್ಪ: ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಿರುಗುಪ್ಪ ತಾಲ್ಲೂಕು ಘಟಕದ 2029ನೇ ಅವಧಿಯ ನೂತನ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.

ನಗರದ ಎಸ್‌ಇಎಸ್ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಡಾ.ಕೆ.ಹನುಮಂತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿರ್ಣಯ ಕೈಗೊಳ್ಳಲಾಯಿತು.

ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಜಿ. ಧನಂಜಯ ಹರಿವಾಣ, ಉಪಾಧ್ಯಕ್ಷರಾಗಿ ವಿ. ರಾಜಶೇಖರ್, ಕಾರ್ಯದರ್ಶಿಯಾಗಿ ಎಂ. ವಿಷ್ಣುವರ್ಧನ್ ರೆಡ್ಡಿ, ಖಜಾಂಚಿಯಾಗಿ ಬಿ. ಗಿರೀಶ್, ಸಹ ಕಾರ್ಯದರ್ಶಿಯಾಗಿ ರೇವಣಸಿದ್ದನಗೌಡ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಪರಶುರಾಮ ಆಯ್ಕೆಯಾದರು. ನಾಮನಿರ್ದೇಶಿತ ಸದಸ್ಯರಾಗಿ ಲಕ್ಷ್ಮೀದೇವಿ ಮತ್ತು ಜ. ಸಿಂತು ಆಯ್ಕೆಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಜಿ. ಹೊನ್ನೂರಪ್ಪ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಎಸ್. ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸಿದ್ದ (ಸಿದ್ದು), ಬಳ್ಳಾರಿ ಪೂರ್ವ ವಲಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಬಿ. ತಿಪ್ಪೇಸ್ವಾಮಿ, ಸಿರುಗುಪ್ಪ ತಾಲ್ಲೂಕು ಹಂಗಾಮಿ ಅಧ್ಯಕ್ಷ ದೇವೇಂದ್ರಗೌಡ ಹಾಗೂ ಹಿರಿಯ ಶಿಕ್ಷಕ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ