×
Ad

Siruguppa | ಅಕ್ರಮ ಪಡಿತರ ಅಕ್ಕಿ ಸಾಗಾಟ ಪತ್ತೆ: 30.40 ಕ್ವಿಂಟಲ್ ಅಕ್ಕಿ, ಬೊಲೆರೊ ವಾಹನ ವಶ

Update: 2026-07-04 19:28 IST

ಸಿರುಗುಪ್ಪ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಪ್ರಕರಣವನ್ನು ಆಹಾರ ಇಲಾಖೆ ಹಾಗೂ ಹಚೋಳ್ಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಭೇದಿಸಿದ್ದು, 30.40 ಕ್ವಿಂಟಲ್ ಪಡಿತರ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಲಾಗಿದ್ದ ಬೊಲೆರೊ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ತಾಲೂಕಿನ ಬೈರಗಾಮದಿನ್ನಿ ಗ್ರಾಮದಿಂದ ನಾಡಂಗ ಗ್ರಾಮದ ಕಡೆಗೆ ಪಡಿತರ ಅಕ್ಕಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಆಹಾರ ನಿರೀಕ್ಷಕ ವಿಜಯಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಎಪಿ-39 ಡಬ್ಲ್ಯೂಸಿ-8240 ನೋಂದಣಿ ಸಂಖ್ಯೆಯ ಬೊಲೆರೊ ವಾಹನವನ್ನು ತಡೆದು ಪರಿಶೀಲಿಸಿದಾಗ, 35–40 ಕೆ.ಜಿ. ತೂಕದ 80 ಚೀಲಗಳಲ್ಲಿ ಒಟ್ಟು 30.40 ಕ್ವಿಂಟಲ್ ಪಡಿತರ ಅಕ್ಕಿ ಪತ್ತೆಯಾಯಿತು.

ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ 97,280 ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಕಿ ಹಾಗೂ ವಾಹನವನ್ನು ಜಪ್ತಿ ಮಾಡಲಾಗಿದ್ದು, ವಾಹನ ಚಾಲಕನನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ಕೇಶವ ಹಾಗೂ ವೆಂಕಟೇಶ್ ವಿರುದ್ಧ ಹಚೋಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News