ಸಿರುಗುಪ್ಪ | ಮಾರುತಿ ನಡಿವಿಮನೆಗೆ ಕನ್ನಡ ವಿಷಯದಲ್ಲಿ ಪಿಎಚ್‌ಡಿ ಪದವಿ
Update: 2026-08-06 20:03 IST
ಸಿರುಗುಪ್ಪ: ತಾಲೂಕಿನ ಮುದ್ದಟನೂರು ಗ್ರಾಮದ ಮಾರುತಿ ನಡಿವಿಮನೆ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯವು ಕನ್ನಡ ವಿಷಯದಲ್ಲಿ ಡಾಕ್ಟರೇಟ್ (ಪಿಎಚ್.ಡಿ.) ಪದವಿ ಪ್ರದಾನ ಮಾಡಿದೆ.
ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ರಾಂತ ಪ್ರಾಧ್ಯಾಪಕ ಹಾಗೂ ಹಿರಿಯ ಸಾಹಿತಿ ಡಾ. ಅರವಿಂದ ಮಾಲಗತ್ತಿ ಅವರ ಮಾರ್ಗದರ್ಶನದಲ್ಲಿ ‘ಹೊಸಗನ್ನಡ ಕಥನಕವನದ ಆಯಾಮಗಳು (ಪ್ರಾತಿನಿಧಿಕ ಅಧ್ಯಯನ)’ ವಿಷಯದ ಕುರಿತು ಸಂಶೋಧನೆ ನಡೆಸಿ ಮಹಾಪ್ರಬಂಧ ಸಲ್ಲಿಸಿದ್ದರು.
ಸಂಶೋಧನಾ ಪ್ರಬಂಧವನ್ನು ಮೌಲ್ಯಮಾಪನ ಮಾಡಿದ ಮೈಸೂರು ವಿಶ್ವವಿದ್ಯಾನಿಲಯವು ಕನ್ನಡ ವಿಷಯದಲ್ಲಿ ಪಿಎಚ್.ಡಿ. ಪದವಿ ಪ್ರದಾನ ಮಾಡಿದೆ.
ಮಾರುತಿ ನಡಿವಿಮನೆ ಅವರ ಈ ಶೈಕ್ಷಣಿಕ ಸಾಧನೆಗೆ ಕುಟುಂಬದವರು, ಸಾಹಿತ್ಯ ವಲಯದ ಗಣ್ಯರು, ಸ್ನೇಹಿತರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.