ಸಿರುಗುಪ್ಪ| ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಸಿರುಗುಪ್ಪ: ನಗರದಲ್ಲಿ ಹಝರತ್ ಟಿಪ್ಪು ಸುಲ್ತಾನ್ ಸಂಘದ ವತಿಯಿಂದ ಮೈಸೂರು ಹುಲಿ ಟಿಪ್ಪು ಸುಲ್ತಾನ್ ಜಯಂತಿಯನ್ನು ಮಂಗಳವಾರ ಸಂಭ್ರಮದಿಂದ ಆಚರಿಸಲಾಯಿತು.
ಈ ವೇಳೆ ಸಂಘದ ಅಧ್ಯಕ್ಷ ಹಮೀದ್ ಸಾಬ್ ಮಾತನಾಡಿ, ಟಿಪ್ಪು ಸುಲ್ತಾನ್ ಅವರು ಬ್ರಿಟಿಷರ ಆಕ್ರಮಣದ ವಿರುದ್ಧ ಧೈರ್ಯದಿಂದ ಹೋರಾಡಿದ ಮಹಾನ್ ದೇಶಪ್ರೇಮಿಯಾಗಿದ್ದರು. ಅವರ ಹೋರಾಟ, ತ್ಯಾಗ ಮತ್ತು ಸ್ವಾಭಿಮಾನದ ಇತಿಹಾಸವನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಒಕ್ಕೂಟದ ರಾಜ್ಯಾಧ್ಯಕ್ಷ ಖಾಸಿಂ ಸಾಬ್ ಹಳೇಕೋಟೆ, ರಾಜ್ಯ ಉಪಾಧ್ಯಕ್ಷ ಇನಾಯತುಲ್ಲಾ ಜೆ., ಹಾಗೂ ರಾಜ್ಯ ಖಜಾಂಚಿ ಖಾಜಾ ಸಾಬ್, ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.