ಕಂಪ್ಲಿ: ರಾಜ್ಯದ ಪ್ರಮುಖ ಹಾಗೂ ಸೂಕ್ಷ್ಮ ಕೈಗಾರಿಕಾ ಸ್ಥಾವರಗಳಲ್ಲಿ ಒಂದಾದ ಕುಡತಿನಿ ಸಮೀಪದ ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ (BTPS) ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಭದ್ರತೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿದೆ.

ಪೊಲೀಸ್ ಇನ್ಸ್‌ಪೆಕ್ಟರ್ ಈರಪ್ಪ ಎಸ್.ಬಿ. ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಭದ್ರತಾ ತಪಾಸಣೆಯಲ್ಲಿ ನೌಕರರು ಹಾಗೂ ಕಾರ್ಮಿಕರ ಆರೋಗ್ಯ ಹಿತದೃಷ್ಟಿಯಿಂದ ಅಂದಾಜು 1 ಲಕ್ಷಕ್ಕೂ ಅಧಿಕ ಮೌಲ್ಯದ ಬೀಡಿ, ಸಿಗರೇಟ್, ತಂಬಾಕು ಹಾಗೂ ಮದ್ಯ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ಪತ್ತೆ ಹಚ್ಚಿ ಜಪ್ತಿ ಮಾಡಲಾಗಿದೆ.

ಸ್ಥಾವರದೊಳಗೆ ಪ್ರವೇಶಿಸುವ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದು, ಚಾಲನಾ ಪರವಾನಗಿ (DL) ಹಾಗೂ ವಾಹನ ವಿಮೆ (Insurance) ಸೇರಿದಂತೆ ಅಗತ್ಯ ದಾಖಲೆಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಸರಿಯಾದ ದಾಖಲೆಗಳಿಲ್ಲದ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸುವ ಮೂಲಕ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

ಹದ್ದಿನ ಕಣ್ಣು: ಕಳ್ಳತನಕ್ಕೆ ಬ್ರೇಕ್

ಇನ್ಸ್‌ಪೆಕ್ಟರ್ ಈರಪ್ಪ ಎಸ್.ಬಿ ಹಾಗೂ ಸಿಬ್ಬಂದಿಯ ನಿರಂತರ ಪೆಟ್ರೋಲಿಂಗ್ ಮತ್ತು ಬಿಗಿ ಭದ್ರತೆಯ ಪರಿಣಾಮವಾಗಿ, ಕಳೆದ ಮೂರು ತಿಂಗಳುಗಳಿಂದ ಸ್ಥಾವರದಲ್ಲಿ ಯಾವುದೇ ರೀತಿಯ ಕಳ್ಳತನ ಪ್ರಕರಣಗಳು ಸಂಭವಿಸದಂತೆ ತಡೆಯಲಾಗಿದೆ. ಇಡೀ ಯೋಜನಾ ಪ್ರದೇಶದ ಮೇಲೆ ಭದ್ರತಾ ಪಡೆ ಹದ್ದಿನ ಕಣ್ಣಿಟ್ಟಿದ್ದು, ಭದ್ರತೆಯಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor