ಸಂಡೂರು ಕ್ಷೇತ್ರದಲ್ಲಿ 55.86 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ
ಸಂಡೂರು: ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ 37.67 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ 66/11 ಕೆ.ವಿ. ವಿದ್ಯುತ್ ಉಪಕೇಂದ್ರದ ಕಾಮಗಾರಿಗೆ ಶಾಸಕಿ ಅನ್ನಪೂರ್ಣ ಇ. ತುಕಾರಾಂ ಭೂಮಿಪೂಜೆ ನೆರವೇರಿಸಿದರು.
ಇದೇ ವೇಳೆ 18.18 ಕೋಟಿ ವೆಚ್ಚದಲ್ಲಿ ತಾಲೂಕಿನ ವಿವಿಧೆಡೆ 52 ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಹಾಗೂ 117 ಅಂಗನವಾಡಿ ಕಟ್ಟಡಗಳ ಉನ್ನತೀಕರಣ ಕಾಮಗಾರಿಗಳಿಗೂ ಚಾಲನೆ ನೀಡಲಾಯಿತು.
ನಂತರ ಮಾತನಾಡಿದ ಶಾಸಕಿ ಅನ್ನಪೂರ್ಣ ಇ.ತುಕಾರಾಂ, ವಿದ್ಯುತ್ ಉಪಕೇಂದ್ರ ಸ್ಥಾಪನೆಯಿಂದ ಬಂಡ್ರಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ಉನ್ನತೀಕರಣದಿಂದ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದರು.
ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಷಯ್ ಲಾಡ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಪುರಸಭೆ ಮಾಜಿ ಅಧ್ಯಕ್ಷ ಸಿರಾಜ್, ಕೆಪಿಟಿಸಿಎಲ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್, ಸಿಡಿಪಿಒ ನಾಗರಾಜ್, ಗುತ್ತಿಗೆದಾರ ಜಯರಾಮ್ ಇದ್ದರು.