×
Ad

ಅಜೀಂ ಪ್ರೇಮ್ ಜೀ ವಿವಿ ವಿರುದ್ಧ ಎಬಿವಿಪಿ ಪ್ರತಿಭಟನೆ; ನಾಮಫಲಕಕ್ಕೆ ಮಸಿ ಬಳಿದು ಆಕ್ರೋಶ

Update: 2026-02-24 22:33 IST

ಬೆಂಗಳೂರು: ಸರ್ಜಾಪುರ ಸಮೀಪದ ಬೂರಗುಂಟೆ ಗ್ರಾಮದಲ್ಲಿ ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸೈನ್ಯದ ವಿರುದ್ಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌(ಎಬಿವಿಪಿ)ನ ಪದಾಧಿಕಾರಿಗಳು ಸರ್ಜಾಪುರದ ವಿಶ್ವವಿದ್ಯಾಲಯದ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.

ಎಬಿವಿಪಿ ಪ್ರತಿಭಟನೆಯಿಂದಾಗಿ ವಿಶ್ವವಿದ್ಯಾಲಯದ ಮುಂಭಾಗದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ವಿಶ್ವವಿದ್ಯಾಲಯದ ಆವರಣದಲ್ಲಿ 50ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ʼಭಾರತ್‌ ಮಾತಾ ಕೀ ಜೈʼ ಎಂದು ಘೋಷಣೆಗಳನ್ನು ಕೂಗುತ್ತಾ ಒಳನುಗ್ಗಲು ಪ್ರಯತ್ನಿಸಿದರು. ವಿಶ್ವವಿದ್ಯಾಲಯದ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಅಜೀಂ ಪ್ರೇಮ್‌ ಜೀ ವಿಶ್ವವಿದ್ಯಾಲಯವು ದೇಶ ವಿರೋಧಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಆರೋಪಿಸಿ ಎಬಿವಿಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ನಿರತರನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News