ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಬಿ.ಶಿವಣ್ಣ ನೇಮಕ
ಬೆಂಗಳೂರು : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಆನೇಕಲ್ ಶಾಸಕ ಬಿ.ಶಿವಣ್ಣ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಿ.ಎನ್.ಆನಂದ್ ಅಧಿಸೂಚನೆ ಹೊರಡಿಸಿದ್ದಾರೆ.