×
Ad

ಇದೇ ವರ್ಷದೊಳಗೆ ಬಿಬಿಎಂಪಿ ಚುನಾವಣೆ: ಸಚಿವ ರಾಮಲಿಂಗಾರೆಡ್ಡಿ

Update: 2023-06-24 22:17 IST

ಬೆಂಗಳೂರು, ಜೂ.24: ಇದೇ ವಾರ್ಷಿಕ ಸಾಲಿನ ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ನಡೆಯುವ ವಿಶ್ವಾಸ ಇದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮುನ್ನ ಬಿಬಿಎಂಪಿ ಚುನಾವಣೆ ಆಗಲಿದೆ. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮೇಯರ್ ಇಟ್ಟುಕೊಂಡೇ ಲೋಕಸಭೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದರು.

ಚುನಾವಣೆ ಬೇಗ ಆಗಬೇಕೆಂದು ನಮ್ಮ ಪಕ್ಷದವರೇ ಕಾನೂನು ಹೋರಾಟಕ್ಕೆ ಮುಂದಾಗಿದ್ದು, ಬಿಜೆಪಿಯವರು ವಾರ್ಡ್ ವಿಂಗಡಣೆ ಮನಸೋಇಚ್ಛೆ ಮಾಡಿದ್ದಾರೆ. ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದ್ದೇವೆ ಎಂದ ಅವರು, ಇದೀಗ ವಾರ್ಡ್ ವಿಂಗಡಣೆ ವಿಚಾರ ಅಧಿಕಾರಿಗಳ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಾವು ಇದಕ್ಕೆ ಕೈ ಹಾಕುವುದಿಲ್ಲ ಎಂದು ಅವರು ಉಲ್ಲೇಖಿಸಿದರು.

ಬಿಬಿಎಂಪಿ ಹೊಸ ಕಾಯ್ದೆ ಪ್ರಕಾರ 243 ವಾರ್ಡ್ ಗಳಿಗೆ ಚುನಾವಣೆ ಮಾಡುತ್ತೇವೆ. ಎಲ್ಲ ಕಾಲದಲ್ಲೂ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಿದ್ದೇವೆ. ಈ ಬಾರಿಯೂ ನಾವು ಚುನಾವಣೆ ಮಾಡುತ್ತೇವೆ ಎಂದು ರಾಮಲಿಂಗಾರೆಡ್ಡಿ ನುಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News