×
Ad

Bengaluru | ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 6.23 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ

Update: 2025-12-29 22:45 IST

ಸಾಂದರ್ಭಿಕ ಚಿತ್ರ | PC : gemini AI

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದವರ ಪತ್ತೆಹಚ್ಚಿದ ಕಸ್ಟಮ್ಸ್‌ ಅಧಿಕಾರಿಗಳು 6.23 ಕೋಟಿ ರೂ. ಮೌಲ್ಯದ 17.80 ಕೆ.ಜಿ. ಹೈಡ್ರೋಫೋನಿಕ್ ಗಾಂಜಾ ವಶಪಡಿಸಿಕೊಂಡು, ಬ್ಯಾಂಕಾಕ್‍ನಿಂದ ಆಗಮಿಸಿದ್ದ ಮೂವರು ಪ್ರಯಾಣಿಕರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಬ್ಯಾಂಕಾಕ್‍ನಿಂದ ಆಗಮಿಸಿದ ವಿಮಾನಗಳ ಮೇಲೆ ವಿಶೇಷ ನಿಗಾವಹಿಸಿ ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಆರೋಪಿಗಳ ಬ್ಯಾಗ್‍ನಲ್ಲಿ ಗುಪ್ತವಾಗಿ ಮರೆಮಾಡಲಾಗಿದ್ದ ಮಾದಕ ವಸ್ತುಗಳು ಪತ್ತೆಯಾಗಿವೆ. ಈ ಸಂಬಂಧ ಮೂವರು ಆರೋಪಿಗಳನ್ನು ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆಯಡಿಯಲ್ಲಿ ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News