Bengaluru | ಪ್ರಧಾನಮಂತ್ರಿಯವರ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸಭೆ
Update: 2026-07-14 13:01 IST
ಬೆಂಗಳೂರು : ರಾಜ್ಯ ಮಟ್ಟದ ಪ್ರಧಾನಮಂತ್ರಿಯವರ ನೂತನ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸಭೆಯು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆಯಿತು.
ಸಮಿತಿಯ ಸದಸ್ಯ ಕಾರ್ಯದರ್ಶಿ ಡಾ.ಮಾಝುದ್ದೀನ್ ಖಾನ್ ಅವರು ಸಭೆಯಲ್ಲಿ ಪರಿಶೀಲನಾ ವರದಿಯನ್ನು ಮಂಡಿಸಿದರು. ಈ ವೇಳೆ ಪರಿಶೀಲನೆ ನಡೆಸಿದ ಶಾಲಿನಿ ರಜನೀಶ್ ಅವರು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಶಮ್ಲಾ ಇಕ್ಬಾಲ್ ಮತ್ತು ಸದಸ್ಯರಾದ ಸನಾ ಉಲ್ಲಾ, ನಿವೃತ್ತ ಐಎಎಸ್ ಅಧಿಕಾರಿ ಪ್ರೊ. ಅಖೀಲ್ ಅಹ್ಮದ್, ಪ್ರೊ. ವಿಕ್ಟರ್ ಲೋಬೊ, ಬುಟ್ಟದತ್ತ, ಡಾ.ತಾಹಾ ಮತೀನ್, ಮಹೇಂದ್ರ ಸಿಂಗ್ವಿ ಭಾಗವಹಿಸಿ ತಮ್ಮ ಸಲಹೆಗಳನ್ನು ನೀಡಿದರು.
ಸದಸ್ಯ ಕಾರ್ಯದರ್ಶಿ ಡಾ. ಮಾಜುದ್ದೀನ್ ಖಾನ್ ಅವರ ವಂದನೆಯೊಂದಿಗೆ ಸಭೆಯು ಮುಕ್ತಾಯಗೊಂಡಿತು.