Bengaluru | ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಮೂವರು ಪ್ರಾಣಾಪಾಯದಿಂದ ಪಾರು
Update: 2026-08-23 19:21 IST
ಸಾಂದರ್ಭಿಕ ಚಿತ್ರ | PC : AI
ಬೆಂಗಳೂರು : ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ತಗಲಿ ಸುಟ್ಟು ಕರಕಲಾದ ಘಟನೆ ಕೋರಮಂಗಲದ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ನಡೆದಿದ್ದು, ಎಚ್ಚೆತ್ತುಕೊಂಡ ಕಾರಿನ ಚಾಲಕ ಸೇರಿ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ನೋಡಿ ಚಾಲಕ ರಸ್ತೆ ಪಕ್ಕ ಕಾರು ನಿಲ್ಲಿಸಿ ಕೆಳಗಿಳಿದಿದ್ದಾನೆ. ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರೂ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲು ಸ್ಥಳೀಯರು ಪ್ರಯತ್ನಿಸಿದ್ದಾರೆ. ಆದರೆ ಸಾಧ್ಯವಾಗದೇ ಕಾರು ಸಂಪೂರ್ಣ ಸುಟ್ಟು ಹೋಗಿದೆ. ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಕೆಲವರು ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.