ಬೆಂಗಳೂರು | ಸುರಂಗ ಮಾರ್ಗದ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಸಹಿ ಸಂಗ್ರಹ
Update: 2025-11-15 12:33 IST
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪ್ರಕೃತಿಯನ್ನು ನಾಶಪಡಿಸಿ, ಕೆರೆಗಳನ್ನು ಹಾಳುಮಾಡಿ, ಅವೈಜ್ಞಾನಿಕ ಮೇಲು ಸೇತುವೆಗಳನ್ನು ನಿರ್ಮಿಸಿ, ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿದೆ ಎಂದು ಬಿಜೆಪಿಯಿಂದ ಕೆರೆಯ ಸಂರಕ್ಷಣೆಗಾಗಿ ಸಹಿ ಸಂಗ್ರಹ, ವೀಕ್ಷಣೆ ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ಪರಿಶೀಲನೆಯನ್ನು ಇಂದು ಮಲ್ಲೇಶ್ವರದ 18ನೇ ಕ್ರಾಸ್ ಬಳಿ ಇರುವ ಸ್ಯಾಂಕಿ ಕೆರೆಯ ಮುಖ್ಯದ್ವಾರದ ಬಳಿ ಹಮ್ಮಿಕೊಳ್ಳಲಾಯಿತು.
ಈ ವೇಳೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಮಾಜಿ ಸಚಿವ ಮತ್ತು ಶಾಸಕ ಗೋಪಾಲಯ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.