ಬೆಂಗಳೂರು: ಕಗ್ಗದಾಸಪುರದ 6ನೇ ಕ್ರಾಸ್‍ನಲ್ಲಿರುವ ಪಾಳು ಜಾಗದಲ್ಲಿ ಅಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಜಾಗದಲ್ಲಿ ದಿಢೀರನೇ ನಾಲ್ಕು ಸಿಲಿಂಡರ್ ಗಳು ಸ್ಫೋಟಗೊಂಡಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಸ್ಫೋಟದ ರಭಸಕ್ಕೆ ಸಿಲಿಂಡರ್ ಒಂದರ ಭಾಗ ಪಕ್ಕದಲ್ಲೇ ಇದ್ದ ಶಾಲೆಯ ಕಿಟಕಿಗೆ ಬಂದು ಬಿದ್ದಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಗ್ಗದಾಸಪುರದ 6ನೇ ಕ್ರಾಸ್‍ನಲ್ಲಿರುವ ಮೂರ್ತಿ ಎಂಬುವವರಿಗೆ ಸೇರಿದ ನಿವೇದನದಲ್ಲಿ (ನಿವೇಶನದಲ್ಲಿ) ಈ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದಿಂದಾಗಿ ಶೆಡ್ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸಿಲ್ಲ ಎಂಬುದು ಖಚಿತಪಟ್ಟಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor