×
Ad

ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ

Update: 2026-01-26 22:06 IST

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವೆಡೆ ಸೋಮವಾರ ಸಂಜೆ ಜಿಟಿ ಜಿಟಿ ಮಳೆ ಸುರಿದಿದ್ದು, ಇನ್ನೆರಡು ದಿನಗಳ ಕಾಲ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಸೋಮವಾರ ಬೆಐಗ್ಗೆಯಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನ ಬಳಿಕ ನಗರದ ವಿವಿಧ ಪ್ರದೇಶಗಳಲ್ಲಿ ಜಿಟಿ ಜಿಟಿ ಮಳೆ ಸುರಿಯಿತು. ಅದರಲ್ಲೂ ಹೆಬ್ಬಾಳ, ಆರ್‍ಟಿನಗರ, ಯಲಹಂಕ, ಸದಾಶಿವ ನಗರ, ವಿಧಾನಸೌಧ, ಮಡಿವಾಳ, ಲಕ್ಕಸಂದ್ರ, ಶಾಂತಿನಗರ, ಕೆ.ಎಚ್. ರಸ್ತೆ ಸೇರಿದಂತೆ ಅನೇಕ ಕಡೆ ಮಳೆ ಬಿದ್ದಿದೆ.

ಈ ಜಿಟಿ ಜಿಟಿ ಮಳೆಯಿಂದ ಸಂಜೆ ಮನೆಗೆ ತಲುಪಬೇಕಾದ ವಾಹನ ಸವಾರರು ರಸ್ತೆಯಲ್ಲಿ ಸಿಲುಕಿದ್ದ ದೃಶ್ಯ ಕಂಡಿತು. ಕೆಲ ದಿನಗಳಿಂದ ಹಲವು ಜಿಲ್ಲೆಗಲ್ಲಿ ಮಳೆಯಾಗುತ್ತಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬೆಂಗಳೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News