ಕೋಗಿಲು ಅಕ್ರಮ ನಿರ್ಮಾಣ ತೆರವು ಪ್ರಕರಣ: ಸತ್ಯಶೋಧನೆಗೆ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಬಿಜೆಪಿ ತಂಡ ರಚನೆ
Update: 2025-12-31 19:10 IST
ಬೆಂಗಳೂರು: ಯಲಹಂಕದ ಕೋಗಿಲು ಲೇಔಟ್ ಬಳಿಯಿರುವ ಫಕೀರ್ ಕಾಲನಿ ಮತ್ತು ವಸೀಮ್ ಬಡಾವಣೆಯಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ನೆಲಸಮ ಮಾಡಿರುವ ಕುರಿತು ಸತ್ಯಶೋಧನೆಗೆ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಏಳು ಮಂದಿಯ ತಂಡವನ್ನು ಬಿಜೆಪಿ ರಚಿಸಿದೆ.
ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸತ್ಯಶೋಧನಾ ತಂಡವನ್ನು ರಚಿಸಿ ಆದೇಶ ಹೊರಡಿಸಿದ್ದು, ಶಾಸಕ ಎಸ್.ಮುನಿರಾಜು, ಪರಿಷತ್ ಸದಸ್ಯ ಕೆ.ಎಸ್.ನವೀನ್, ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ಕಾರ್ಯದರ್ಶಿ ತಮ್ಮೇಶ್‍ಗೌಡ, ಜಿಲ್ಲಾಧ್ಯಕ್ಷ ಎಸ್.ಹರೀಶ್ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ಅವರು ತಂಡದಲ್ಲಿದ್ದಾರೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿ, ಒಂದು ವಾರದೊಳಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.