×
Ad

ದ್ವೇಷ ಭಾಷಣ ಮಸೂದೆ; BNS ಕಾನೂನುಗಳಲ್ಲೇ ಇವೆ, ಪ್ರತ್ಯೇಕವಾಗಿ ಬೇಡ : ಕೇಂದ್ರ ಗೃಹ ಸಚಿವಾಲಯ

Update: 2026-05-26 22:05 IST

ಬೆಂಗಳೂರು : ಕೋಮು ಗಲಭೆ ನಿಯಂತ್ರಿಸುವ ಹಾಗೂ ಸಮಾಜದಲ್ಲಿ ಶಾಂತಿಗೆ ಒತ್ತು ನೀಡುವ ಸಲುವಾಗಿ ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತರಲು ಹೊರಟ್ಟಿದ್ದ ಕರ್ನಾಟಕದ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆಗೆ ಕೇಂದ್ರ ಸರಕಾರ ಬ್ರೇಕ್‌ ಹಾಕಿದೆ.

ಫೆಬ್ರವರಿಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಈ ಮಸೂದೆಗೆ ಅನುಮೋದನೆ ನೀಡಲು ನಿರಾಕರಿಸಿದ ಬಳಿಕ ರಾಜ್ಯ ಸರಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅನುಮೋದನೆಗಾಗಿ ಮಸೂದೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು. ಆದರೆ, ಮೇ 12ರಂದು ಕಳುಹಿಸಿದ ಪತ್ರದಲ್ಲಿ ಗೃಹ ಸಚಿವಾಲಯ, ಮಸೂದೆಯಲ್ಲಿ ಪರಿಹರಿಸಲು ಯತ್ನಿಸಿರುವ ವಿಷಯಗಳು ಈಗಾಗಲೇ ಭಾರತೀಯ ನ್ಯಾಯ ಸಂಹಿತೆ-2023 ಮತ್ತು ಇತರ ಕಾನೂನುಗಳಲ್ಲೇ ಇವೆ. ಹೀಗಾಗಿ ಪ್ರತ್ಯೇಕವಾಗಿ ರಾಜ್ಯಗಳು ಕಾನೂನು ಜಾರಿ ಮಾಡುವುದರಿಂದ ಪುನರಾವರ್ತನೆ ಮತ್ತು ಏಕರೂಪತೆಯ ಕೊರತೆ ಉಂಟಾಗಬಹುದು ಎಂದು ಉಲ್ಲೇಖಿಸಿದೆ.

2025ರ ಡಿಸೆಂಬರ್‍ನಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಈ ಮಸೂದೆಯನ್ನು ತ್ವರಿತವಾಗಿ ಅಂಗೀಕರಿಸಲಾಗಿತ್ತು. ಈ ಮಸೂದೆ ಪ್ರಕಾರ, ದ್ವೇಷ ಅಪರಾಧ ಅಥವಾ ದ್ವೇಷ ಭಾಷಣ ಮಾಡಿದರೆ ಒಂದು ವರ್ಷದಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸುವ ಅವಕಾಶವಿದೆ. ಮರು ಅಪರಾಧಕ್ಕೆ ಏಳು ವರ್ಷಗಳವರೆಗೆ ಶಿಕ್ಷೆ ಮತ್ತು 1 ಲಕ್ಷದ ವರೆಗೆ ದಂಡ ವಿಧಿಸುವ ಬಗ್ಗೆಯೂ ಮಸೂದೆಯಲ್ಲಿ ಸೇರಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News