ಸಿಇಟಿ: ವೈದ್ಯಕೀಯ, ಇಂಜಿನಿಯರಿಂಗ್ ತಾತ್ಕಾಲಿಕ ಫಲಿತಾಂಶ ಪ್ರಕಟ
ಬೆಂಗಳೂರು : ಇಂಜಿನಿಯರಿಂಗ್ ಸೇರಿದಂತೆ ಇತರ ಸಿಇಟಿ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ರಾತ್ರಿ ಪ್ರಕಟಿಸಿದೆ.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಗಳು ಇದ್ದಲ್ಲಿ ಆಧಾರ ಸಮೇತ ಆ.24ರ ಸಂಜೆ 4ಗಂಟೆಯೊಳಗೆ ಇ-ಮೇಲ್ ಮೂಲಕ (keauthority_ka@nic.in) ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಇದು ತಾತ್ಕಾಲಿಕ ಫಲಿತಾಂಶವಾಗಿರುವ ಕಾರಣ ಸೀಟು ಹಂಚಿಕೆಯಾಗಿರುವ ಕಾಲೇಜಿನಲ್ಲಿ ಪ್ರವೇಶ ಪಡೆಯುವಂತಿಲ್ಲ. ಆಕ್ಷೇಪಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳ ಎರಡನೇ ಸುತ್ತು ಹಾಗೂ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ ಮೊದಲನೇ ಸುತ್ತಿನ ತಾತ್ಕಾಲಿಕ ಫಲಿತಾಂಶ ಇದಾಗಿದೆ ಎಂದು ಅವರು ಹೇಳಿದ್ದಾರೆ.