Devanahalli | ವಿಮಾನ ನಿಲ್ದಾಣದಲ್ಲಿ 4.22 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
Update: 2026-07-12 19:30 IST
ಸಾಂದರ್ಭಿಕ ಚಿತ್ರ | PC : Gemini AI
ಬೆಂಗಳೂರು : ಪ್ರಯಾಣಿಕನೊಬ್ಬ ವಿದೇಶದಿಂದ ತಂದಿದ್ದ 4.22 ಕೋಟಿ ರೂ. ಮೌಲ್ಯದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬ್ಯಾಂಕಾಕ್‍ನಿಂದ ಬೆಂಗಳೂರಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್‍ನಲ್ಲಿ ಮಾದಕ ವಸ್ತುವನ್ನು ಅಡಗಿಸಿಟ್ಟುಕೊಂಡು ಬರುವ ಮೂಲಕ ಸಾಗಾಟ ಯತ್ನ ನಡೆಸಿದ್ದನು. ಆದರೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಸದ್ಯ ಎನ್‍ಡಿಪಿಎಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದ್ದು, ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಹೇಳಿದ್ದಾರೆ.