ಬೆಂಗಳೂರು : ಹೊಸದಿಲ್ಲಿಯಿಂದ ಬೆಂಗಳೂರಿಗೆ ಅಧಿಕಾರಿಗಳನ್ನು ಕಳುಹಿಸಿ ಬಿಜೆಪಿಯವರು ನನ್ನನ್ನು ಟ್ರ್ಯಾಕ್ ಮಾಡುತ್ತಿದ್ದಾರೆ. ಅವರು ನನ್ನನ್ನು ಸುಮ್ಮನೆ ಬಿಡಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಫೋಟಕ ಮಾಹಿತಿ ನೀಡಿದ್ದಾರೆ.

ರವಿವಾರ ಖಾಸಗಿ ಸುದ್ದಿವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಅವರು, ಬಿಜೆಪಿಯವರು ದಿಲ್ಲಿಯಿಂದ ಕಳಿಸಿರುವ ಅಧಿಕಾರಿಗಳು ನನ್ನ ಸುತ್ತಮುತ್ತಲೇ ಇದ್ದಾರೆ. ದಿಲ್ಲಿಯಿಂದಲೇ ಕುಳಿತು ಆ ಅಧಿಕಾರಿಗಳನ್ನು ಆಪರೇಟ್ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೆ, ಚುನಾವಣೆ ಹೊತ್ತಿಗೆ ನಮ್ಮ ಸರಕಾರದ ಇನ್ನೂ ಐದಾರು ಸಚಿವರ ಮೇಲೆ ಐ.ಟಿ., ಈ.ಡಿ. ಮೂಲಕ ದಾಳಿಗೆ ಕಾಯುತ್ತಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಕೆಪಿಎಸ್‍ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕೆಪಿಎಸ್‍ಸಿ ಪರೀಕ್ಷೆ ವಿಚಾರದಲ್ಲಿ ಪ್ರಿಯಾಂಕ್ ಖರ್ಗೆ ಅವರ ಮೇಲೆ ಯಾವುದೇ ಆರೋಪ ಇಲ್ಲ. ಕೆಪಿಎಸ್‍ಸಿಗೂ ಪ್ರಿಯಾಂಕ್ ಖರ್ಗೆಗೂ ಯಾವುದೇ ಸಂಬಂಧವಿಲ್ಲ. ಪ್ರಿಯಾಂಕ್ ಬುದ್ಧಿವಂತರಾಗಿ ಈ.ಡಿ.ಗೆ ಪ್ರಕರಣ ಬಿಟ್ಟುಕೊಡದೇ ಆರೋಪಿತ ಅಧಿಕಾರಿಯನ್ನು ಬಯಲಿಗೆಳೆದಿದ್ದಾರೆ ಎಂದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor