ಬೆಂಗಳೂರು : ಜಾತಿ, ಕುಲದ ಹೆಸರಿನಲ್ಲಿ ಭೇದಭಾವ ಮಾಡುವುದನ್ನು ಬಿಟ್ಟು ಮಾನವೀಯತೆ ಮತ್ತು ಸಮಾನತೆಯ ತತ್ವಗಳನ್ನು ಪಾಲಿಸಬೇಕು ಎಂಬ ಕನಕದಾಸರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುವುದೆ ಆ ಮಹಾನ್ ದಾಸರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಶುಕ್ರವಾರ ನಗರದ ಶಾಸಕರ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಲ ಕುಲ ಕುಲವೆಂದು ಹೊಡೆದಾಡಬೇಡಿ, ಇದೆಲ್ಲವನ್ನೂ ಬಿಟ್ಟು ಮಾನವೀಯತೆಯ ಹಾದಿಯಲ್ಲಿ ಸಾಗಬೇಕು ಎಂದು ಕನಕದಾಸರು ನಮಗೆಲ್ಲ ಕಿವಿಮಾತು ಹೇಳಿದ್ದಾರೆ. ಅವರ ಈ ಸಂದೇಶವನ್ನು ನಾವೆಲ್ಲರೂ ಪಾಲಿಸಿದರೆ ಅದಕ್ಕಿಂತ ದೊಡ್ಡ ಸಾಧನೆ ಮತ್ತೊಂದಿಲ್ಲ ಎಂದು ತಿಳಿಸಿದರು.

ಭಕ್ತಿಯ ಪರಂಪರೆಯಲ್ಲಿ ಕನಕದಾಸರು ಅತ್ಯಂತ ಶ್ರೇಷ್ಠ ಸ್ಥಾನ ಹೊಂದಿದ್ದಾರೆ. ಇಂತಹ ಮಹಾನ್ ದಾಸರು ಇಂದು ನಮ್ಮನ್ನೆಲ್ಲ ಅಗಲಿದ್ದಾರೆ. ಆದರೆ, ಅವರು ಬಿಟ್ಟುಹೋದ ಆದರ್ಶಗಳು, ತತ್ವಗಳು ಮತ್ತು ಹೆಜ್ಜೆಗುರುತುಗಳು ಸದಾ ನಮ್ಮೊಂದಿಗೆ ಇರಲಿವೆ. ಅವುಗಳನ್ನು ಪಾಲಿಸಿಕೊಂಡು ನಡೆಯುವುದೇ ಮುಖ್ಯ. ಅವರ ಸಂದೇಶವನ್ನು ಕೇವಲ ಆಚರಣೆಗಳಿಗೆ ಸೀಮಿತಗೊಳಿಸದೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor