×
Ad

ರಾಜ್ಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬದ್ಧರಾಗಿದ್ದಾರೆ: ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ

Update: 2026-06-17 00:05 IST

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ರಾಜಧಾನಿ ಬೆಂಗಳೂರು ಮಾತ್ರವಲ್ಲ, ಇಡೀ ರಾಜ್ಯದ ಅಭಿವೃದ್ಧಿಗೆ ಬದ್ಧರಾಗಿದ್ದಾರೆ ಎಂದು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಶಾ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಉದ್ಯಮಿಗಳ ನಿಯೋಗದೊಂದಿಗೆ ಸಿಎಂ ಡಿ.ಕೆ.ಶಿವಕುಮಾರ್‍ರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ಬೆಂಗಳೂರನ್ನು ವಿಶ್ವದರ್ಜೆಯ ನಗರವನ್ನಾಗಿ ಮಾಡುವ ನಿಟ್ಟಿನಲ್ಲಿ ಸರಕಾರ ತೆಗೆದುಕೊಳ್ಳುವ ಉಪಕ್ರಮಗಳನ್ನು ಬೆಂಬಲಿಸುತ್ತೇವೆ. ನಗರದಲ್ಲಿ ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕೋರಿದರು.

ಬೆಂಗಳೂರು ನಗರದ ಅಭಿವೃದ್ಧಿ ದೃಷ್ಟಿಯಿಂದ ಶಿವಕುಮಾರ್ ಅವರು ಈಗಾಗಲೇ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಅವರು ಇನ್ನಷ್ಟು ವೇಗಗತಿಯಲ್ಲಿ ಕೆಲಸಗಳನ್ನು ಚುರುಕುಗೊಳಿಸಲಿದ್ದಾರೆ. ಇನ್ನೂ ಮಾಡಬೇಕಾದ ಕೆಲಸಗಳು ಸಾಕಷ್ಟಿವೆ. ಬೆಂಗಳೂರಿಗೆ ಉತ್ತಮ ಮೂಲಸೌಕರ್ಯಗಳ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು.

ಸುರಂಗ ರಸ್ತೆ, ಮೇಲ್ಸೇತುವೆ, ಹೆದ್ದಾರಿಗಳು, ಕಾರಿಡಾರ್‍ಗಳು ಮತ್ತು ಪೆರಿಫೆರಲ್ ರಿಂಗ್ ರೋಡ್ ಸೇರಿವೆ. ಹಾಗೆಯೇ ಹೊರ ವರ್ತುಲ ರಸ್ತೆ ಸುಧಾರಣೆಗಾಗಿ ವಿಶೇಷ ಬಜೆಟ್ ಹಂಚಿಕೆ ಮಾಡಲಾಗಿದೆ. ಹೀಗಾಗಿ, ಮುಂದೆ ಸಾಕಷ್ಟು ಬದಲಾವಣೆಗಳಾಗಲಿವೆ. ಕಸ ವಿಲೇವಾರಿ ಮತ್ತು ಘನತ್ಯಾಜ್ಯ ನಿರ್ವಹಣೆಯಲ್ಲಿ ಧೈರ್ಯದ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಅವರು ತಿಳಿಸಿದರು.

ಈ ವೇಳೆ ಉದ್ಯಮಿಗಳಾದ ಗೀತಾಂಜಲಿ ಕಿರ್ಲೊಸ್ಕರ್, ಮೋಹನ್ ಸುರೇಶ್, ರವಿಶಂಕರ್, ಶಬೀನಾ ಸುಲ್ತಾನ, ಕಾರ್ತಿಕ್ ತಲ್ಲಮ್, ರಾಘವೇಂದ್ರ ಪೂಜಾರಿ, ವಿಕ್ರಂ ವಿಶ್ವನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News