ಬೆಂಗಳೂರು : ಕಸ ವಿಂಗಡಣೆ ಮಾಡುವ ಘಟಕದಲ್ಲಿ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.

ಅರಸಮ್ಮ(45) ಮೃತ ಮಹಿಳೆ. ದೊಡ್ಡಬಳ್ಳಾಪುರ ತಾಲೂಕಿನ ಕಾಡತಿಪ್ಪೂರು ಗ್ರಾಮದ ಮಹಿಳೆ ಅರಸಮ್ಮ ದೊಡ್ಡಬಳ್ಳಾಪುರದ MSGP ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದರು. ಇಂದು(ಅ.2) ಎಂದಿನಂತೆ ಬೆಳಗ್ಗೆ ಅರಸಮ್ಮ ಕೆಲಸಕ್ಕೆ ಹೋಗಿದ್ದರು. ಆದರೆ ತ್ಯಾಜ್ಯ ಸಂಸ್ಕರಣಾ ಯಂತ್ರದಲ್ಲಿ ಅರಸಮ್ಮ ಸಿಲುಕಿಕೊಂಡ ಪರಿಣಾಮ ಕೈಕಾಲು ಕಟ್ ಆಗಿ ತೀವ್ರ ರಕ್ತ ಸ್ರಾವ ಆದ ಪರಿಣಾಮ ಸ್ಥಳದಲ್ಲೆ ಅರಸಮ್ಮ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor