ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರನ್ನು ಭೇಟಿಯಾದ ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ. ತುಂಬೆ ಮೊಯ್ದೀನ್‌

Update: 2026-07-19 20:56 IST

ಬೆಂಗಳೂರು: ಅನಿವಾಸಿ ಕನ್ನಡಿಗ, ತುಂಬೆ ಗ್ರೂಪ್‌ನ ಸ್ಥಾಪಕಾಧ್ಯಕ್ಷರಾದ ಡಾ. ತುಂಬೆ ಮೊಯ್ದೀನ್ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದರು.

ದುಬೈನಲ್ಲಿ ನಡೆಯಲಿರುವ ಶೈಕ್ಷಣಿಕ ಸಮಾವೇಶಕ್ಕೆ ಸಿಎಂ ಅವರನ್ನು ಡಾ. ತುಂಬೆ ಮೊಯ್ದೀನ್ ಅವರು ಆಹ್ವಾನಿಸಿದರು.

ಈ ವೇಳೆ ಆರೋಗ್ಯ ಸಚಿವ ಯು.ಟಿ. ಖಾದರ್‌ ಹಾಗೂ ಡಾ. ತುಂಬೆ ಮೊಯ್ದೀನ್ ಅವರ ಸಹೋದರ ಬಿ.ಎ. ಅಶ್ರಫ್ ಇದ್ದರು.

ಡಾ. ತುಂಬೆ ಮೊಯ್ದೀನ್ ಅವರು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವಾ ಹಾಗೂ ಸಂಶೋಧನಾ ಕ್ಷೇತ್ರಗಳಿಗೆ ನೀಡಿದ ಕೊಡುಗೆಗಾಗಿ ಅವರು ಯುಎಇ ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಮನ್ನಣೆ ಗಳಿಸಿದ್ದಾರೆ. ಅವರು 2024ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೂ ಭಾಜನರಾಗಿದ್ದಾರೆ.

ಯುಎಇಯಲ್ಲಿ ಕಾರ್ಯನಿರ್ವಹಿಸುತ್ತಿರುವ ತುಂಬೆ ಗ್ರೂಪ್, ಅಂತರರಾಷ್ಟ್ರೀಯ ಮಟ್ಟದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಮೆಡಿಕಲ್ ಎಜುಕೇಷನ್, ಆರೋಗ್ಯ ಸೇವೆಗಳು ಮತ್ತು ವೈದ್ಯಕೀಯ ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತುಂಬೆ ಗ್ರೂಪ್ ವಿಸ್ತರಿಸಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News