×
Ad

Bengaluru | ಅಂಧ ಪತ್ನಿಯನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಮಾಡಿಕೊಂಡ ಪತಿ

Update: 2026-06-23 22:23 IST

Photo credit: etvbharat.com

ಬೆಂಗಳೂರು: ವೃದ್ಧ ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕೃತ್ಯದ ಸಂಬಂಧ ಪ್ರತ್ಯೇಕ ಕೊಲೆ ಹಾಗೂ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಹತ್ಯೆಯಾದ ಸುಮಿತ್ರಾ ದೇವಿ(77) ಅಂಧ ಹಾಗೂ ಕಿವುಡರಾಗಿದ್ದರು. ಆತ್ಮಹತ್ಯೆಗೆ ಶರಣಾದ ನಂದನ್ ಪ್ರಸಾದ್(83) ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.

ಬಿಹಾರ ಮೂಲದ ವೃದ್ಧ ದಂಪತಿ ನಗರದ ಚೊಕ್ಕನಾಯಕನಹಳ್ಳಿಯ ಅಪಾರ್ಟ್‍ಮೆಂಟ್‍ವೊಂದರಲ್ಲಿ ವಾಸವಾಗಿದ್ದರು. ದಂಪತಿ ಪುತ್ರ ಕಿರಣ್ ಕುಮಾರ್ ಕಶ್ಯಪ್ ಏರ್ ಫೋರ್ಸ್‍ನಲ್ಲಿ ಕೆಲಸ ಮಾಡಿ ನಿವೃತ್ತಿ ಹೊಂದಿದ್ದು, ಪ್ರಸ್ತುತ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪತ್ನಿ-ಮಕ್ಕಳು ಹಾಗೂ ತಂದೆ ತಾಯಿಯೊಂದಿಗೆ ಒಂದೇ ಮನೆಯಲ್ಲಿ ವಾಸವಾಗಿದ್ದರು.

ಬದುಕಿನ ಸಂಧ್ಯಾಕಾಲದಲ್ಲಿ ಮಕ್ಕಳಿಗೆ ತಾವು ಹೊರೆಯಾಗಬಾರದು ಎಂಬ ಕಾರಣಕ್ಕಾಗಿ ಖಿನ್ನತೆಗೆ ಜಾರಿದ್ದರು. ನಿನ್ನೆ ರಾತ್ರಿ ಪತ್ನಿಯನ್ನ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News