×
Ad

Bengaluru | ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ರೀಲ್ಸ್ ಮಾಡುತ್ತಿದ್ದ ಮಂಜು ಅಲಿಯಾಸ್ ʼಅಮುಕು-ಡುಮುಕುʼ ವಿರುದ್ಧ ಎಫ್‍ಐಆರ್ ದಾಖಲು

Update: 2026-07-16 21:27 IST

ಮಂಜು ಯಾನೆ ಅಮುಕು-ಡುಮುಕು

ಬೆಂಗಳೂರು: ಮಹಿಳೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದಡಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಿದ್ದ ಮಂಜು ಯಾನೆ ಅಮುಕು-ಡುಮುಕು ವಿರುದ್ಧ ಇಲ್ಲಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

36 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಮಂಜು ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈತನಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನದೇ ಶೈಲಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆರೋಪಿ ಮಂಜು ಗುರುತಿಸಿಕೊಂಡಿದ್ದ. ಜು.9ರಂದು ನಗರದ ಬಾರ್ ಅಂಡ್ ಪಬ್‍ಗೆ ಪ್ರಮೋಷನ್ ಮಾಡುವುದಾಗಿ ಮಂಜು ಬಂದಿದ್ದ. ಮದ್ಯ ಸೇವಿಸಿ ಊಟ ಮಾಡಿ ಬಳಿಕ ಬಿಲ್ ಕಟ್ಟದೆ, ಅಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಕೈ ಹಿಡಿದು ಅನುಚಿತವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ.

ಈ ಘಟನೆ ಬಳಿಕ ಬಾರ್ ನಿಂದ ಹೊರಬಂದು ಮತ್ತೋರ್ವ ಮಹಿಳೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದ. ಆಗ ಮಹಿಳೆ ನಿರಾಕರಿಸಿದ್ದಕ್ಕೆ ನಿಂದಿಸಿದ್ದ. ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಪೋಸ್ಟ್ ಮಾಡಿದ್ದರು. ಪೋಸ್ಟ್ ನೋಡಿ ಕರೆ ಮಾಡಿದ ಆರೋಪಿಯು ನನ್ನ ವಿರುದ್ಧ ಅಪಪ್ರಚಾರ ಮಾಡಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News