ಬೆಂಗಳೂರು : ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‍ಐಆರ್) ಪ್ರಕ್ರಿಯೆಯಲ್ಲಿ ನಮೂನೆ 7 ಅನ್ನು ದುರ್ಬಳಕೆ ಮಾಡಿಕೊಂಡು ಮತದಾರರ ಮಾಹಿತಿ ಕಳ್ಳತನ ಮಾಡಿರುವ ವ್ಯಕ್ತಿಗಳ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಬೇಕು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ಒಂದು ಸಮುದಾಯದವರನ್ನು ಗುರುತಿಸಿಕೊಂಡು, ನಮೂನೆಗಳನ್ನು ಎಲ್ಲಿಯೋ ಮುದ್ರಿಸಿ ತರಲಾಗುತ್ತಿದೆ. ಅವರ ಮಾಹಿತಿಯನ್ನು ಅವರಿಗೆ ಯಾರು ಕೊಟ್ಟರು? ಆ ಮಾಹಿತಿ ಎಲ್ಲಿಂದ ಸಿಕ್ಕಿತು? ಮುದ್ರಿತ ನಮೂನೆಗಳ ಮೇಲೆ ಅವರ ಹೆಸರು ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ಬರೆದು ಸಲ್ಲಿಸಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾದದ್ದು ಎಂದು ಹೇಳಿದರು.

ನಮೂನೆ 7ರ ಅನ್ವಯ ಒಬ್ಬ ವ್ಯಕ್ತಿ ಎಷ್ಟು ಅರ್ಜಿ ಸಲ್ಲಿಸಬಹುದು? ಅದಕ್ಕೆ ಇತಿಮಿತಿ ಇಲ್ಲವೇ? ಒಬ್ಬರೇ 100, 200, 400 ಅರ್ಜಿಗಳನ್ನು ಸಲ್ಲಿಸಿದರೆ ಅದು ಯಾವ ರೀತಿ ಸಾಧ್ಯ?. ಈ ಎಲ್ಲವನ್ನೂ ನಾವು ಸಾಕ್ಷ್ಯ ಸಹಿತ ಚುನಾವಣಾ ಆಯೋಗಕ್ಕೆ ನೀಡಿದ್ದೇವೆ. ಚುನಾವಣಾ ಆಯೋಗವು ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ಏಳು ದಿನಗಳ ಸಮಯ ಕೊಟ್ಟು, ನಂತರ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದೆ. ಅದನ್ನು ಅವರು ಮಾಡಬೇಕು. ನಾವು ಗುರುತಿಸಿ ನೀಡಿರುವ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor