ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು

Update: 2026-07-17 22:33 IST

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶುಕ್ರವಾರ ಇಲ್ಲಿನ ಎಚ್‍ಎಲ್‍ಎಲ್ ಹಳೆ ವಿಮಾನ ನಿಲ್ದಾಣದ ರಸ್ತೆಯಲ್ಲಿನ ಖಾಸಗಿ ಆಸ್ಪತ್ರೆಗೆ ಚೆನ್ನಮ್ಮ ಅವರನ್ನು ದಾಖಲು ಮಾಡಲಾಗಿದ್ದು, ಅವರಿಗೆ 86 ವರ್ಷ ವಯಸ್ಸಾಗಿದೆ. ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News