×
Ad

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನದಲ್ಲಿ ಹೊಗೆ; ಆಗಿದ್ದೇನು?

Update: 2026-05-26 23:23 IST
PC : X/@Fahadnaimb

ಬೆಂಗಳೂರು : ಕೆಂಪೇಗೌಡ ಏರ್‌ಪೋರ್ಟ್‌ನ ಟರ್ಮಿನಲ್-1ರಲ್ಲಿ ಟೇಕಾಫ್‌ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನದ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಘಟನೆ ವರದಿಯಾಗಿದೆ.

ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್‌ಗಾಗಿ ರನ್‌ವೇಯಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್ ಬಳಿ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಕೂಡಲೇ ಎಚ್ಚೆತ್ತ ಪೈಲಟ್ ವಿಮಾನವನ್ನು ರನ್‌ವೇನಲ್ಲೇ ನಿಲ್ಲಿಸಿದರು. ಸ್ಥಳಕ್ಕೆ ಕೆಐಎಬಿ ಅಗ್ನಿಶಾಮಕ ಸಿಬ್ಬಂದಿ ಮತ್ತು ಹಿರಿಯ ತಾಂತ್ರಿಕ ಅಧಿಕಾರಿಗಳು ಬಂದು ಪರಿಶೀಲಿಸಿದರು. ಪ್ರಯಾಣಿಕರನ್ನು ತುರ್ತಾಗಿ ಅಲ್ಲಿಂದ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News