×
Ad

ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿ ಜಯಂದರ್ ಸಿಂಗ್ ನೇಮಕ

Update: 2025-11-13 00:06 IST

ಬೆಂಗಳೂರು: ರಮೇಶ್ ಬಾಬು ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಅವರ ಬದಲಿಗೆ ಬೆಂಗಳೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಜಯಂದರ್ ಸಿಂಗ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ಬುಧವಾರ ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಶಶಿಕಲಾ ಸಿ. ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ವಿವಿ ಸಿಂಡಿಕೆಟ್‍ಗೆ ಮೂರು ವರ್ಷಗಳ ಅವಧಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಜಯಂದರ್ ಸಿಂಗ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಾತಿನಿಧ್ಯ ಸಿಕ್ಕಿದೆ: ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ(ಎನ್‍ಎಸ್‍ಯುಐ)ದ ಮುಖಂಡರಾದ ಜಯಂದರ್ ಸಿಂಗ್ ಅವರನ್ನು ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದ್ದು, ಯುವ ನಾಯಕತ್ವ, ವಿದ್ಯಾರ್ಥಿಗಳ ಕಲ್ಯಾಣ ಮತ್ತು ಶೈಕ್ಷಣಿಕ ಸುಧಾರಣೆಗೆ ನೆರವಾಗಲಿದೆ. ಅಲ್ಲದೆ, ವಿದ್ಯಾರ್ಥಿಗಳ ಹಿತಾಸಕ್ತಿಗೆ ಪ್ರಾತಿನಿಧ್ಯ ಸಿಕ್ಕಂತೆ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News