×
Ad

ಕೋಗಿಲು ಬಡಾವಣೆ ತೆರವು ಪ್ರಕರಣ | ಐವರು ಹಿರಿಯ ಅಧಿಕಾರಿಗಳ ವಿರುದ್ಧ ಪ್ರಕರಣ: ವಕೀಲ ಉಮಾಪತಿ

Update: 2026-02-24 21:13 IST

ಬೆಂಗಳೂರು: ಕೋಗಿಲು ಬಡಾವಣೆಯಲ್ಲಿ 180ಕ್ಕೂ ಹೆಚ್ಚು ಮನೆಗಳನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಎಸಿಜೆಎಂ ನ್ಯಾಯಾಲಯವು ಐವರು ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿಕೊಂಡಿದೆ ಎಂದು ವಕೀಲ ಉಮಾಪತಿ ಎಸ್. ತಿಳಿಸಿದ್ದಾರೆ.

ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳಾದ ಮಹೇಶ್ವರ ರಾವ್ ಎಂ., ಪೊಮ್ಮಲ ಸುನಿಲ್‍ಕುಮಾರ್, ಕರಿಗೌಡ, ಜಗದೀಶ್ ಮತ್ತು ಸೀಮಂತ್ ಕುಮಾರ್ ಸಿಂಗ್ ಅವರನ್ನು ದೂರಿನಲ್ಲಿ ಆರೋಪಿಸಲಾಗಿದೆ. ನ್ಯಾಯಾಲಯವು ಇದೀಗ ಐವರು ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 2023ರ ಕಠಿಣ ಸೆಕ್ಷನ್‍ಗಳಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ವಕೀಲರಾದ ಟಿ. ನರಸಿಂಹಮೂರ್ತಿ, ಸುಧಾ ಕಟ್ವಾ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News