ಟಿಕೆಟ್ ರಹಿತ ಪ್ರಯಾಣ : ಡಿಸೆಂಬರ್ ತಿಂಗಳಲ್ಲಿ 4,353 ಪ್ರಯಾಣಿಕರಿಂದ 8ಲಕ್ಷ ರೂ.ದಂಡ ವಸೂಲಿ
Update: 2026-01-17 19:08 IST
ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಎಸ್ಸಾರ್ಟಿಸಿ) ಡಿಸೆಂಬರ್ ತಿಂಗಳಲ್ಲಿ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 4,353 ಪ್ರಯಾಣಿಕರಿಂದ ಒಟ್ಟು 8ಲಕ್ಷ ರೂ.ಗಳಿಗೂ ಅಧಿಕ ಮೊತ್ತದ ದಂಡ ವಸೂಲಿ ಮಾಡಿದೆ.
ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 43,553 ವಾಹನಗಳನ್ನು ತನಿಖೆಗೊಳಪಡಿಸಿ 4,207 ಪ್ರಕರಣಗಳನ್ನು ಪತ್ತೆಹಚ್ಚಿ, 4,353 ಟಿಕೆಟ್ ರಹಿತ ಪ್ರಯಾಣಿಕರಿಂದ 8,08,704 ರೂ.ಗಳನ್ನು ದಂಡ ವಸೂಲಿ ಮಾಡಿದೆ. ಅಲ್ಲದೆ, ಇದೇ ವೇಳೆ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,14,500 ರೂ.ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ತಪ್ಪಿತಸ್ಥರ ವಿರುದ್ದ ಕ್ರಮವನ್ನು ಜರುಗಿಸಲಾಗಿದೆ ಎಂದು ತಿಳಿಸಲಾಗಿದೆ.