ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ-2026’ಕ್ಕೆ ಸಮಾಜ ಸೇವಕ ಡಾ.ವೂಡೇ ಪಿ.ಕೃಷ್ಣ' ಅವರು ಭಾಜನರಾಗಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಹಾಗೂ ಗಾಂಧೀಜಿಯವರ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಸೆಪ್ಟಂಬರ್ 23ರಂದು ಸಭೆ ನಡೆಸಿ ಪರಿಶೀಲನೆ ನಡೆಸಿತು. ಪ್ರಶಸ್ತಿಗಾಗಿ ಸ್ವೀಕರಿಸಲಾಗಿದ್ದ ಒಟ್ಟು 6 ಸಂಸ್ಥೆಗಳು ಹಾಗೂ 24ವ್ಯಕ್ತಿಗಳ ಅರ್ಹತೆ ಹಾಗೂ ಸೇವಾ ವಿವರಗಳನ್ನು ಸುದೀರ್ಘವಾಗಿ ಪರಿಶೀಲಿಸಿದ ಸಮಿತಿಯು, ಡಾ.ವೂಡೇ ಪಿ.ಕೃಷ್ಣರನ್ನು 2026ನೇ ಸಾಲಿನ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಿದೆ.

ಆಯ್ಕೆ ಸಮಿತಿಯ ವರದಿ ಹಾಗೂ ಶಿಫಾರಸ್ಸನ್ನು ಅಂಗೀಕರಿಸಿರುವ ಸರಕಾರವು ಡಾ.ವೂಡೇ ಪಿ.ಕೃಷ್ಣ ಅವರಿಗೆ ಈ ಪ್ರಶಸ್ತಿಯನ್ನು ಘೋಷಿಸಲು ಹರ್ಷ ವ್ಯಕ್ತಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor