ಬೆಂಗಳೂರು | ಮಹಿಳಾ ಪಿ.ಜಿ.ಗೆ ನುಗ್ಗಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಯ ಬಂಧನ
Update: 2025-09-04 20:31 IST
ಬೆಂಗಳೂರು: ಮಹಿಳಾ ಪಿ.ಜಿ.(ಪೇಯಿಂಗ್ ಗೆಸ್ಟ್)ಗೆ ನುಗ್ಗಿ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಇಲ್ಲಿನ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಆಂಧ್ರಪ್ರದೇಶದ ಮದನ್‍ಪಲ್ಲಿ ಮೂಲದ ಕೆ.ನರೇಶ್ ಪಟ್ಯಂ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.
ಆ.29ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿ.ಗೆ ನುಗ್ಗಿದ್ದ ಆರೋಪಿಯು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವೇಳೆ ಪ್ರತಿರೋಧ ಒಡ್ಡಿ, ಕೂಗಾಡಿ ಹೊರಬಂದಿದ್ದ ಯುವತಿಯ ಕಪಾಳಕ್ಕೆ ಹೊಡೆದು, ಆಕೆಯನ್ನು ಎಳೆದಾಡಿ ಆರೋಪಿ ಸ್ಥಳದಿಂದ ಪರಾರಿಯಾಗಿದ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿರುವುದಾಗಿ ತಿಳಿಸಿದ್ದಾರೆ.