×
Ad

Mandya | ಅಪರಿಚಿತ ವಾಹನ ಢಿಕ್ಕಿ: ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತ್ಯು

Update: 2025-12-23 23:03 IST

ಮಂಡ್ಯ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮದ್ದೂರು ತಾಲೂಕಿನ ತುಮಕೂರು- ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿರುವುದು ವರದಿಯಾಗಿದೆ.

ಮಂಡ್ಯ ತಾಲೂಕಿನ ಕೊತ್ತತ್ತಿ ಹೋಬಳಿಯ ಹುಲ್ಕೆರೆ ಗ್ರಾಮದ ಮಂಚೇಗೌಡ ಅವರ ಪುತ್ರ ಶಂಕರ್(43) ಹಾಗೂ ಜೋಗಯ್ಯ ಅವರ ಪುತ್ರ ವೀರೇಂದ್ರ(46) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ.

ಮೃತರು ಮದ್ದೂರು ತಾಲೂಕಿನ ತೊರೆಶೆಟ್ಟಿಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಉತ್ತರ ಕ್ರಿಯಾಧಿ ಕಾರ್ಯದಲ್ಲಿ ಪಾಲ್ಗೊಂಡು ವಾಪಸ್ಸು ಸ್ವಗ್ರಾಮದತ್ತ ತೆರಳುತ್ತಿದ್ದ ವೇಳೆ ಮದ್ದೂರು-ತುಮಕೂರು ಮಾರ್ಗದಲ್ಲಿ ಚಲಿಸುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಪಘಾತದಿಂದಾಗಿ ಮದ್ದೂರು- ತುಮಕೂರು ಹೆದ್ದಾರಿ ಸಂಚಾರ ಅಸ್ಥವ್ಯಸ್ಥಗೊಂಡು ಪ್ರಯಾಣಿಕರು ಪರದಾಡುವಂತಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹಗಳನ್ನು ಮದ್ದೂರು ತಾಲೂಕು ಆಸ್ಪತ್ರೆಗೆ ರವಾನಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಈ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆಹಚ್ಚಲು ಪೊಲೀಸರು ಸಿ.ಸಿ.ಕ್ಯಾಮರಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಮಳವಳ್ಳಿ ಡಿ.ವೈ.ಎಸ್.ಪಿ ಯಶವಂತ್ ಹಾಗೂ ಗ್ರಾಮಾಂತರ ವೃತ್ತ ನಿರೀಕ್ಷಕ ನಾರಾಯಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News