×
Ad

ಶಾಸಕ ಶಾಮನೂರು ಶಿವಶಂಕರಪ್ಪ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ

Update: 2025-11-22 23:08 IST

ಶಾಸಕ ಶಾಮನೂರು ಶಿವಶಂಕರಪ್ಪ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು (94) ವಯೋ ಸಹಜ‌ ಕಾಯಿಲೆ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಮನೂರು ಶಿವಶಂಕರಪ್ಪರನ್ನು ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ವೇಳೆ ಆಸ್ಪತ್ರೆಯಲ್ಲಿದ್ದ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್​, ಮಾವನ ಆರೋಗ್ಯದ ಬಗ್ಗೆ ಸಿಎಂಗೆ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News