ಬೆಂಗಳೂರು| ಆನ್‍ಲೈನ್ ಗೇಮ್ ಚಟಕ್ಕೆ ಬಿದ್ದ ಅಕ್ಕನ ಮಗನ ಕೊಲೆ; ಮಾವನ ಬಂಧನ
ʼಫ್ರೀ ಫೈರ್ʼ ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ ಬಾಲಕ!
Update: 2025-08-08 20:18 IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಆನ್‍ಲೈನ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಕೊಲೆಗೈದ ಪ್ರಕರಣದಡಿ ಆರೋಪಿಯನ್ನು ಘಟನೆ ಇಲ್ಲಿನ ಸೋಲದೇವನಹಳ್ಳಿ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಅಮೋಘ ಕೀರ್ತಿ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಸದ್ಯ ಸೋಲದೇವನಹಳ್ಳಿ ಠಾಣಾ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ಬಾಲಕನ ಮಾವನಾದ ನಾಗಪ್ರಸಾದ್ ಎಂಬಾತನನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಪ್ರಕರಣ ವಿವರ:
ಬಾಲಕ ಅಮೋಘ ಕೀರ್ತಿ 8 ತಿಂಗಳಿನಿಂದ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್‍ನಲ್ಲಿ ʼಫ್ರೀ ಫೈರ್ʼ ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಆಗಸ್ಟ್ 4ರಂದು ಬಾಲಕನ ಕತ್ತು ಸೀಳಿ ಕೊಲೆಗೈದಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.