ಬೆಂಗಳೂರು : ಜಿಬಿಎ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ನವೆಂಬರ್ 28ರಂದು ಇ-ಖಾತಾ ಮೇಳ ಇರುವುದಿಲ್ಲ. ಡಿಸೆಂಬರ್ 5ರಿಂದ ಪ್ರತಿ ಶನಿವಾರ ಪುನರಾರಂಭವಾಗಲಿದೆ ಎಂದು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದ್ದಾರೆ.

ಗುರುವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಸೂಚನೆಯಂತೆ, ನವೆಂಬರ್ 28ರಂದು ಸಾರ್ವಜನಿಕ ರಜೆ ಇರುವ ಹಿನ್ನೆಲೆಯಲ್ಲಿ ಅಂದು ಜಿಬಿಎ ವ್ಯಾಪ್ತಿಯಲ್ಲಿ ನಡೆಯಬೇಕಿದ್ದ ಇ-ಖಾತಾ ಮೇಳ ಕಾರ್ಯಕ್ರಮವನ್ನು ನಡೆಸಲಾಗುವುದಿಲ್ಲ ಎಂದರು.

ಇ-ಖಾತಾ ಸಂಬಂಧಿತ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವುದು, ಬಾಕಿ ಇರುವ ಅರ್ಜಿಗಳನ್ನು ಪರಿಶೀಲಿಸುವುದು ಹಾಗೂ ಅರ್ಜಿದಾರರಿಗೆ ಅಗತ್ಯ ಮಾರ್ಗದರ್ಶನ ನೀಡುವ ಉದ್ದೇಶದಿಂದ ಪ್ರತಿ ಶನಿವಾರ ಇ-ಖಾತಾ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದರು.

ಈ ಹಿನ್ನೆಲೆಯಲ್ಲಿ, ನವೆಂಬರ್ 28ರ ಕಾರ್ಯಕ್ರಮವನ್ನು ಹೊರತುಪಡಿಸಿ, ಮುಂದಿನ ಡಿಸೆಂಬರ್ 5ರಿಂದ ಇ-ಖಾತಾ ಓಪನ್ ಹೌಸ್ ಕಾರ್ಯಕ್ರಮವು ಜಿಬಿಎ ವ್ಯಾಪ್ತಿಯ 62 ಎಆರ್‍ಒ ಕಚೇರಿಗಳಲ್ಲಿ ಪ್ರತಿ ಶನಿವಾರ ಎಂದಿನಂತೆ ಪುನರಾರಂಭವಾಗಲಿದೆ ಎಂದು ಮುಖ್ಯ ಆಯುಕ್ತರು ಹೇಳಿದರು.

ಸಾರ್ವಜನಿಕರು ಡಿಸೆಂಬರ್ 5ರಿಂದ ತಮ್ಮ ವ್ಯಾಪ್ತಿಯ ಎಆರ್‍ಒ ಕಚೇರಿಗಳಿಗೆ ಭೇಟಿ ನೀಡಿ ಇ-ಖಾತಾ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಹಾಗೂ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಮುಖ್ಯ ಆಯುಕ್ತರು ತಿಳಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಯೋಗೇಶ್ ಮಲ್ಲೂರು/ವಾರ್ತಾಭಾರತಿ

contributor

ಯೋಗೇಶ್ ಮಲ್ಲೂರು ಅವರು ವಾರ್ತಾಭಾರತಿ ದಿನಪತ್ರಿಕೆಯ ಬೆಂಗಳೂರು ಬ್ಯೂರೋದಲ್ಲಿ ವರದಿಗಾರ/ಉಪಸಂಪಾದಕ. ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಲ್ಲೂರಿನವರಾದ ಯೋಗೇಶ್, ತುಮಕೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ಇವರು ಹಲವು ದಿನಪತ್ರಿಕೆಗಳು ಹಾಗೂ ಡಿಜಿಟಲ್ ಸುದ್ದಿ ಮಾಧ್ಯಮಗಳಲ್ಲಿ ಕ್ರೈಂ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಒಟ್ಟಾರೆ, ಪತ್ರಿಕೋದ್ಯಮ ವಲಯದಲ್ಲಿ ಬೆಂಗಳೂರು, ತುಮಕೂರಿನಲ್ಲಿ ಯೋಗೇಶ್ ಅವರಿಗೆ 7 ವರ್ಷಗಳ ಅನುಭವವಿದೆ.